ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ನಗರವನ್ನು ಮಾದಕ ವಸ್ತುವಿನಿಂದ ಮುಕ್ತವಾಗಿಸಲು ಪೊಲೀಸರು ಪಣ ತೊಟ್ಟಿದ್ದಾರೆ. ಸದ್ಯ 90 ಲಕ್ಷ ರೂ. ಮೌಲ್ಯದ ಗಾಂಜಾವನ್ನ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು 'ಈಟಿವಿ ಭಾರತ'ದೊಂದಿಗೆ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಮಾತನಾಡಿ, ಸ್ಥಳೀಯ ಪೊಲಿಸ್ ಠಾಣೆಗಳ ಸಿಬ್ಬಂದಿ ಜೊತೆ ಸಭೆ ನಡೆಸಿ ಎಲ್ಲಾ ಡ್ರಗ್ ಪೆಡ್ಲರ್ಸ್ಅನ್ನು ಮಟ್ಟ ಹಾಕಲು ಮುಂದಾಗಿದ್ದೇವೆ. ಸದ್ಯ ಮೂರು ಆಯಾಮಗಳಲ್ಲಿ ತನಿಖೆಗೆ ಇಳಿದಿದ್ದೇವೆ. ಹಾಗೆ ನಗರದ ಓಯೋ ರೂಂನಲ್ಲಿ ಹಾಗೂ ಲಾಡ್ಜ್ನಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ಇರುವುದು ಕಂಡು ಬಂದರೆ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ ಎಂದರು.
ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ನೈಜೀರಿಯಾ, ಆಪ್ರಿಕನ್ ಪ್ರಜೆಗಳು ವಾಸವಿದ್ದಾರೆ. ಅವರ ಮೇಲೆ ನಿಗಾ ಇಟ್ಟಿದ್ದೇವೆ. ಸದ್ಯ ಬಂಧಿತ ಆರೋಪಿಗಳಿಗೆ ಸ್ಯಾಂಡಲ್ ವುಡ್ ನಂಟು ಇದೆಯಾ ಅನ್ನೋದ್ರ ಬಗ್ಗೆ ತನಿಖೆ ಮುಂದುವರೆದಿದೆ. ಯಾಕೆಂದರೆ ಬಂಧಿತ ಆರೋಪಿಗಳು ಹಲವಾರು ಪಾರ್ಟಿಗಳಲ್ಲಿ ಭಾಗಿಯಾಗಿದ್ದಾರೆ ಎಂದು ಡಿಸಿಪಿ ತಿಳಿಸಿದರು.
ಪ್ರಕರಣ ತನಿಖೆ ಹಂತದಲ್ಲಿರುವ ಕಾರಣ ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಈ ಡ್ರಗ್ಸ್ ಮಾಫಿಯಾದಲ್ಲಿ ಬಹುತೇಕ ಯುವಕರೇ ಭಾಗಿಯಾದ್ದಾರೆ. ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ಇಡದೆ ಇರುವ ಕಾರಣ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.