ETV Bharat / city

ಕವಿಶ್ರೇಷ್ಠ ಕಣವಿ ಅಗಲಿಕೆಗೆ ಸಿಎಂ ಬೊಮ್ಮಾಯಿ, ಗಣ್ಯರ ಸಂತಾಪ

ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಸ್ಥಾನ ಗಳಿಸಿಕೊಂಡಿದ್ದ ಚೆನ್ನವೀರ ಕಣವಿ ಮತ್ತು ಅವರ ಕುಟುಂಬ ನಮಗೆ ಬಹಳಷ್ಟು ಹತ್ತಿರ. ಅವರ ಮಾತುಗಳು ಅತ್ಯಂತ ಮೃದುವಾಗಿದ್ದು, ಮನಸ್ಸು ಗೆಲ್ಲುತ್ತಿದ್ದವು. ಅವರು ಕೋಪ ಮಾಡಿಕೊಂಡಿರುವುದನ್ನು ನಾನು ನೋಡಿಯೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಮರಿಸಿದ್ದಾರೆ.

Political leaders and poets condolence to Channaveera Kanavi demise
ನಾಡೋಜನ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಗಣ್ಯರ ಸಂತಾಪ
author img

By

Published : Feb 16, 2022, 11:07 AM IST

Updated : Feb 16, 2022, 1:15 PM IST

ಇತ್ತೀಚೆಗಷ್ಟೇ ಚಂಪಾ ಅವರನ್ನು ಕಳೆದುಕೊಂಡು ಬಡವಾಗಿದ್ದ ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಆಘಾತವಾಗಿದೆ. ಇಂದು ಚೆಂಬೆಳಕಿನ ಕವಿ ಚೆನ್ನವೀರ ಕಣವಿ ಅವರು ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕಣವಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಾಡು ಕಂಡ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರಾದ ನಾಡೋಜ ಚೆನ್ನವೀರ ಕಣವಿ ನಮ್ಮನ್ನು ಅಗಲಿದ್ದಾರೆ. ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಸ್ಥಾನ ಗಳಿಸಿಕೊಂಡಿದ್ದ ಅವರು ಮತ್ತು ಅವರ ಕುಟುಂಬ ನಮಗೆ ಬಹಳಷ್ಟು ಹತ್ತಿರ. ಅವರ ಮಾತುಗಳು ಅತ್ಯಂತ ಮೃದುವಾಗಿದ್ದು ಮನಸ್ಸು ಗೆಲ್ಲುತ್ತಿದ್ದವು. ಅವರು ಕೋಪ ಮಾಡಿಕೊಂಡಿರುವುದನ್ನು ನಾನು ನೋಡಿಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

  • ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ @BSBommai ಅವರಿಂದ ಸಂತಾಪ. pic.twitter.com/ibzfKR3o2V

    — CM of Karnataka (@CMofKarnataka) February 16, 2022 " class="align-text-top noRightClick twitterSection" data=" ">

'ಕನ್ನಡ ಸಾರಸ್ವತ ಲೋಕ ಅನಾಥ': ಮಾಜಿ ಸಿಎಂ ಯಡಿಯೂರಪ್ಪ, ಕಣವಿ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಹಿರಿಯ ಸಾಹಿತಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನು ತಂದಿದೆ. ಸಮನ್ವಯ ಕವಿ ಎಂದೇ ಹೆಸರಾಗಿದ್ದ ಕಣವಿಯವರನ್ನು ಕಳೆದುಕೊಂಡು ಕನ್ನಡ ಸಾರಸ್ವತ ಲೋಕ ಅನಾಥವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಸಂಖ್ಯ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿಕೊಂಡಿದ್ದಾರೆ.

'ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ': ಸಚಿವ ಕೆ.ಎಸ್.ಈಶ್ವರಪ್ಪ ಕಂಬನಿ ಮಿಡಿದು, ನಾಡೋಜ ಚನ್ನವೀರ ಕಣವಿ ಅವರ ಅಗಲಿಕೆ ರಾಷ್ಟ್ರದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಭಿಮಾನಿಗಳಿಗೆ ಮತ್ತು ಕುಟುಂಬ ವರ್ಗದವರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಪರಮಾತ್ಮ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

'ನಿಧನದ ಸುದ್ದಿ ದುಃಖ ತಂದಿದೆ': ಸಚಿವ ಅಶ್ವತ್ಥ್ ನಾರಾಯಣ್ ಸಂತಾಪ ಸೂಚಿಸಿ, 'ಸಮನ್ವಯ ಕವಿ', ಖ್ಯಾತ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನದ ಸುದ್ದಿ ದುಃಖ ತಂದಿದೆ. ನೂತನ ಶಿಕ್ಷಣ ನೀತಿ ಅನುಷ್ಠಾನದ ಸಂಬಂಧ ಭೇಟಿಯಾದಾಗ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಸಾಹಿತ್ಯಾಭಿಮಾನಿಗಳು, ಹಿತೈಷಿಗಳು, ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ದೊರಕಲೆಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: 'ಸುನೀತಗಳ ಸಾಮ್ರಾಟ' ರೆಂದೇ ಪ್ರಸಿದ್ಧರಾದವರು ಕವಿ ಚನ್ನವೀರ ಕಣವಿ

'ಸುದ್ದಿ ತಿಳಿದು ತೀವ್ರ ಆಘಾತವಾಗಿದೆ': ಕನ್ನಡದ ಸಮನ್ವಯ ಕವಿ ಎಂದೊಡನೆ ನೆನಪಾಗುವವರೇ ಭಾವಜೀವಿ, ಹಿರಿಯ ಕವಿ ಚೆನ್ನವೀರ ಕಣವಿ ಅವರ. ಅವರ ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ‌. ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಟ್ವೀಟ್​ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

'ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ': ಡಾ.ಚೆನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶಾಸಕ ರೇಣುಕಾಚಾರ್ಯ ಸಂತಾಪ ಸೂಚಿಸಿದ್ದಾರೆ.

'ಸಾರಸ್ವತ ಲೋಕದಲ್ಲಿ ದೊಡ್ಡ ಶೂನ್ಯ ಆವರಿಸಿದೆ': ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಣವಿ ಅವರು ಚೇತರಿಸಿಕೊಂಡು ಕ್ಷೇಮವಾಗಿ ಮನೆಗೆ ಮರಳುತ್ತಾರೆಂಬ ನಮ್ಮೆಲ್ಲರ ನಿರೀಕ್ಷೆಯನ್ನು ಹುಸಿ ಮಾಡಿ ಅಗಲಿದ್ದಾರೆ. ಅವರಿಲ್ಲದಿರುವಿಕೆ ಕನ್ನಡ ಸಾರಸ್ವತ ಲೋಕದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿ ಮಾಡಿದೆ ಎಂದು ಹೇಳಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರು, ನಾಡಿನ ಜನರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಟ್ವೀಟ್ ಮಾಡಿರುವುದು ಮಾತ್ರವಲ್ಲದೇ, ಕಣವಿ ಅವರ ಕವಿತೆಯೊಂದನ್ನು ಉಲ್ಲೇಖಿಸಿದ್ದಾರೆ.

'ತುಂಬಲಾರದ ನಷ್ಟ': ಕನ್ನಡದ ಜನಪ್ರಿಯ ಹಿರಿಯ ಸಾಹಿತಿ ನಾಡೋಜ ಡಾ.ಚನ್ನವೀರ ಕಣವಿ ವಿಧಿವಶರಾದ ಸಂಗತಿ ತಿಳಿದು ಆಘಾತವುಂಟಾಗಿದೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಹಾಗು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

'ಕನ್ನಡದ ಸಾಹಿತ್ಯ ಲೋಕದ ನಕ್ಷತ್ರ': ಕನ್ನಡದ ಸಾಹಿತ್ಯ ಲೋಕದ ನಕ್ಷತ್ರದಂತಿದ್ದ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಬಹು ದೊಡ್ಡ ನಷ್ಟ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

1996ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕಣವಿ ಅವರು ಸಾಹಿತ್ಯ ಲೋಕದಲ್ಲಿ ಸಲ್ಲಿಸಿದ್ದ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ,ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪುರಸ್ಕಾರಗಳು ಅವರ ಮುಕುಟ ಅಲಂಕರಿಸಿದ್ದವು ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ. ಕಣವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಸಾಹಿತ್ಯ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Last Updated : Feb 16, 2022, 1:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.