ETV Bharat / city

ರಾಜಕಾರಣಿಗಳ ಶಿಫಾರಸ್ಸು ಪತ್ರ ಪರಿಗಣಿಸುವುದಿಲ್ಲ: ಹೈಕೋರ್ಟ್​ಗೆ ಪೊಲೀಸ್ ಮಹಾನಿರ್ದೇಶಕರ ಸ್ಪಷ್ಟನೆ

author img

By

Published : Feb 13, 2020, 7:19 PM IST

ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕಾರಣಿಗಳ ಶಿಫಾರಸ್ಸು ಪತ್ರಗಳನ್ನು ಪರಿಗಣಿಸುವ ಕ್ರಮ ಪ್ರಶ್ನಿಸಿ ಹಾಗೂ ಈಗಾಗಲೇ ಶಿಫಾರಸ್ಸು ಪತ್ರ ನೀಡಿರುವ ಪ್ರಕರಣಗಳನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸುವಂತೆ ಕೋರಿ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ. ಶಶಿಧರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

politicians-recommendation-letter-is-not-considered
ಪೊಲೀಸ್ ಮಹಾನಿರ್ದೇಶಕ

ಬೆಂಗಳೂರು: ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನು ಇನ್ನು ಮುಂದೆ ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ ಎಂದು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕಾರಣಿಗಳ ಶಿಫಾರಸ್ಸು ಪತ್ರಗಳನ್ನು ಪರಿಗಣಿಸುವ ಕ್ರಮ ಪ್ರಶ್ನಿಸಿ ಹಾಗೂ ಈಗಾಗಲೇ ಶಿಫಾರಸ್ಸು ಪತ್ರ ನೀಡಿರುವ ಪ್ರಕರಣಗಳನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸುವಂತೆ ಕೋರಿ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ. ಶಶಿಧರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿದ್ದಪಡಿಸಿದ್ದ ಪ್ರಮಾಣಪತ್ರವನ್ನು ಸರ್ಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು. ಬಳಿಕ ಪ್ರಮಾಣ ಪತ್ರದ ಸಾರಾಂಶ ವಿವರಿಸಿ, ಇನ್ನು ಮುಂದೆ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಶಾಸಕರು, ಸಂಸದರು ಸೇರಿದಂತೆ ಯಾವುದೇ ರಾಜಕೀಯ ನಾಯಕರ ಶಿಫಾರಸ್ಸು ಪತ್ರಗಳನ್ನು ಪರಿಗಣಿಸುವುದಿಲ್ಲ ಎಂಬ ವಿಚಾರಗಳನ್ನು ಪೀಠದ ಗಮನಕ್ಕೆ ತಂದರು. ಪ್ರಮಾಣ ಪತ್ರ ದಾಖಲಿಸಿಕೊಂಡ ಪೀಠ ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ವೇಳೆ ಜನಪ್ರತಿನಿಧಿಗಳ ಶಿಫಾರಸ್ಸು ಪತ್ರಗಳನ್ನು ಪ್ರಮುಖವಾಗಿ ಪರಿಗಣಿಸುತ್ತಿದ್ದು, ಇಂತಹ ಕ್ರಮ ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ವಿರುದ್ಧವಾಗಿದೆ. ಹಾಗಿದ್ದೂ ಹಲವು ಶಾಸಕರು, ಸಂಸದರು ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸ್ಸು ಪತ್ರ ನೀಡಿದ್ದಾರೆ. ಈ ಶಿಫಾರಸ್ಸು ಪತ್ರಗಳ ಮೇಲೆ ಹಲವು ಅಧಿಕಾರಿಗಳ ವರ್ಗಾವಣೆ ಆಗಿದೆ ಎಂದು ಆರೋಪಿಸಿದ್ದ ಶಶಿಧರ್ ಅವರು ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.