ETV Bharat / city

ಕೋವಿಡ್ ಸಕ್ರಿಯ ಪ್ರಕರಣಗಳ ಹೆಚ್ಚಳದಿಂದ ಚೇತರಿಕೆ ಪ್ರಮಾಣದಲ್ಲಿ ಇಳಿಕೆ.. ಕಳವಳ - ಕರ್ನಾಟಕ ಕೋವಿಡ್​ ವರದಿ

ರಾಜ್ಯದಲ್ಲಿ ಮೊದಲ ಅಲೆ ವೇಳೆ 1..25 ಲಕ್ಷದಷ್ಟು ಸಕ್ರಿಯ ಪ್ರಕರಣಗಳಿದ್ದದ್ದೇ ಗರಿಷ್ಠ ಸಂಖ್ಯೆಯಾಗಿತ್ತು. ಎರಡನೇ ಅಲೆಯಲ್ಲಿ ಹೆಚ್ಚು ಕಡಿಮೆ ಅದರ ಮೂರು ಪಟ್ಟು ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ನಗರವೊಂದರಲ್ಲೇ 2.06 ಲಕ್ಷ ಸಕ್ರಿಯ ಪ್ರಕರಣಗಳಿವೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಮೂರನೇ ಎರಡಷ್ಟು ಉದ್ಯಾನ ನಗರಿಯಲ್ಲಿದೆ. ಆರೋಗ್ಯ ಇಲಾಖೆಯ ಕೋವಿಡ್ ದೈನಂದಿನ ವರದಿಯ ಪ್ರಕಾರ ಸದ್ಯ 2,063 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ 1.70 ಲಕ್ಷ ಕೋವಿಡ್ ಪರೀಕ್ಷೆ ನಡೆದಿದ್ದು ಶೇ. 18.17ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.

covid_discharge
covid_discharge
author img

By

Published : Apr 30, 2021, 7:18 PM IST

ಬೆಂಗಳೂರು: ಕೋವಿಡ್ ಎರಡನೇ ಅಲೆಯ ಅವಧಿಯಲ್ಲಿ ಕಳೆದ ಹತ್ತು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ, ಸಕ್ರಿಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ, ಗುಣಮುಖರಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ಶೇ 98ರಷ್ಟರಿಂದ ಶೇ. 77ಕ್ಕೆ ಇಳಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ 3.28 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನದಿಂದ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದು, 11,833 ಮಂದಿ ಡಿಸ್ಚಾರ್ಚ್​​ ಆಗಿದ್ದಾರೆ. 2192 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಒಟ್ಟು 14,39,822 ಜನರಲ್ಲಿ ಪಾಸಿಟಿವ್ ದೃಢಪಟ್ಟಿದ್ದು, 1095,833 ಜನ ಗುಣಮುಖರಾಗಿದ್ದಾರೆ. 15,036 ಜನ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಮೊದಲ ಅಲೆ ವೇಳೆ 1..25 ಲಕ್ಷದಷ್ಟು ಸಕ್ರಿಯ ಪ್ರಕರಣಗಳಿದ್ದದ್ದೇ ಗರಿಷ್ಠ ಸಂಖ್ಯೆಯಾಗಿತ್ತು. ಎರಡನೇ ಅಲೆಯಲ್ಲಿ ಹೆಚ್ಚು ಕಡಿಮೆ ಅದರ ಮೂರು ಪಟ್ಟು ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ನಗರವೊಂದರಲ್ಲೇ 2.06 ಲಕ್ಷ ಸಕ್ರಿಯ ಪ್ರಕರಣಗಳಿವೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಮೂರನೇ ಎರಡಷ್ಟು ಉದ್ಯಾನ ನಗರಿಯಲ್ಲಿದೆ. ಆರೋಗ್ಯ ಇಲಾಖೆಯ ಕೋವಿಡ್ ದೈನಂದಿನ ವರದಿಯ ಪ್ರಕಾರ ಸದ್ಯ 2,063 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ 1.70 ಲಕ್ಷ ಕೋವಿಡ್ ಪರೀಕ್ಷೆ ನಡೆದಿದ್ದು ಶೇ. 18.17ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.

ಕೋವಿಡ್ ಎರಡನೇ ಅಲೆ ಅತಿಹೆಚ್ಚು ಯುವಕರನ್ನು ಬಲಿಪಡೆದಿದೆ. ಕಳೆದ ಮೂರು ದಿನಗಳಿಂದ 170 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ಕೋವಿಡ್ ಪ್ರಕರಣಗಳು ದಿನವೊಂದಕ್ಕೆ 40 ಸಾವಿರಕ್ಕೆ ಏರಿಕೆಯಾಗಿದೆ. ಏ.25 ರಂದು 34,804 ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಸಧ್ಯ ನಿಮಿಷವೊಂದಕ್ಕೆ 27 ಮಂದಿಯಲ್ಲಿ ಪಾಸಿಟಿವ್ ದೃಢಪಡುತ್ತಿದೆ. ಕಳೆದ ನಾಲ್ಕು ದಿನದಲ್ಲಿ ಒಟ್ಟು 1.35 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 5 ನಿಮಿಷಕ್ಕೊಬ್ಬರು ಮೃತಪಡುತ್ತಿದ್ದಾರೆ. ಮೃತರಲ್ಲಿ 72 ಮಂದಿ 50 ವರ್ಷ ಒಳಗಿನವರಾಗಿದ್ದಾರೆ. ಕಳೆದ ಎರಡು ದಿನಗಳಲ್ಲಿ 150 ಕ್ಕಿಂತ ಹೆಚ್ಚು ಯುವಕರು ಮೃತಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.