ಬೆಂಗಳೂರು: ಉದ್ಯಾನನಗರಿ ಬೆಂಗಳೂರು ಮತ್ತು ಅಕ್ಕಪಕ್ಕದ ನಾಲ್ಕು ಜಿಲ್ಲೆಗಳಲ್ಲಿ ಇಂದು ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಂಭವವಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶನಿವಾರ ಧರ್ಮಸ್ಥಳದಲ್ಲಿ 3 ಸೆ.ಮೀ. ಮಳೆಯಾಗಿದ್ದು ವಿರಾಜಪೇಟೆ, ಉಡುಪಿ, ಗುಡಿಬಂಡೆಯಲ್ಲಿ ತಲಾ 1 ಸೆ.ಮೀ. ಮಳೆ ಬಿದ್ದಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.