ಬೆಂಗಳೂರು: ರಾಜ್ಯದಲ್ಲಿ ಇಂದು ರಾತ್ರಿ 9 ಗಂಟೆಯಿಂದ ಬೆಳಗ್ಗೆ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಹೇರಿರುವ ಕಾರಣ ಎಲ್ಲ ಅಂಚೆ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಅಂಚೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಿರುವ ಕಾರಣ ಹಾಗೂ ಅಂಚೆ ಇಲಾಖೆಯ ನೌಕರರಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಮಾಣದಿಂದ ಶನಿವಾರ ಇಲಾಖೆಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ.
ಅಗತ್ಯ ಸೇವೆ ಹೊರತುಪಡಿಸಿ ಸಾರ್ವಜನಿಕರ ಓಡಾಟ ಅತಿ ವಿರಳವಾಗಿ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಅಂಚೆ ಇಲಾಖೆಯ ಮುಖ್ಯ ಕಚೇರಿ ಸೇರಿದಂತೆ ಎಲ್ಲ ಕಚೇರಿಗಳನ್ನು ಮುಚ್ಚಲು ಅಂಚೆ ಇಲಾಖೆ ನಿರ್ಧರಿಸಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಪ್ರಕಟಣೆಯಲ್ಲಿ ತಿಳಿಸಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.