ಬೆಂಗಳೂರು: ರಾಜ್ಯ ಸರ್ಕಾರ ಕನಿಷ್ಠ ವೇತನದ ಆದೇಶವನ್ನು ಒಂದು ವರ್ಷಗಳ ಕಾಲ ಮುಂದೂಡಬೇಕಂದು ಎಫ್ಕೆಸಿಸಿಐ ಅಧ್ಯಕ್ಷ ಸಿ. ಆರ್. ಜನಾರ್ಧನ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಳೆದ ಒಂದು ವರ್ಷದಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಆರ್ಥಿಕ ಹಿಂಜರಿತದಿಂದ ತತ್ತರಿಸಿ ಹೋಗಿವೆ. ಸದ್ಯ ಗಾಯದ ಮೇಲೆ ಬರೆ ಎಳೆದಂತೆ ಲಾಕ್ ಡೌನ್‌ನಿಂದಾಗಿ ಕೈಗಾರಿಕೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ಕನಿಷ್ಠ ವೇತನದ ಆದೇಶವನ್ನು ಮುಂದೂಡಬೇಕು ಎಂದು ವಿವರಿಸಿದರು.
12,500 ರೂಪಾಯಿಗಳನ್ನು ಕನಿಷ್ಠ ವೇತನವಾಗಿ ಕುಶಲರಹಿತ ಕಾರ್ಮಿಕರಿಗೆ ನೀಡಬೇಕು ಹಾಗೂ 13 ಸಾವಿರ ರೂಪಾಯಿಗಳನ್ನು ಕುಶಲ ಕಾರ್ಮಿಕರಿಗೆ ನೀಡಬೇಕು ಎಂದು ಸರ್ಕಾರ ಆದೇಶ ಮಾಡಿದೆ.