ETV Bharat / city

ಬೆಂಗಳೂರಲ್ಲಿ ಭಾರಿ ಮಳೆಗೆ ಧರೆಗುರುಳಿದ ವಿದ್ಯುತ್​ ಕಂಬ: 20ಕ್ಕೂ ಹೆಚ್ಚು ಮನೆಗಳಲ್ಲಿ ಪವರ್​ ಕಟ್​

author img

By

Published : Apr 19, 2022, 11:49 AM IST

ಸಿಲಿಕಾನ್​​ ಸಿಟಿಯಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ವಿದ್ಯುತ್ ಕಂಬಗಳು ಧರೆಗುರುಳಿವೆ. ಗಾಯಿತ್ರಿ ನಗರದ 20ಕ್ಕೂ ಹೆಚ್ಚು ಮನೆಗಳಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ.

heavy rain Power shutdown in Gayatri Nagar
ಭಾರಿ ಮಳೆ: ಧರೆಗುರುಳಿದ ವಿದ್ಯುತ್ ಕಂಬಗಳು

ಬೆಂಗಳೂರು: ನಿನ್ನೆ(ಸೋಮವಾರ) ರಾತ್ರಿ ಸುರಿದ ಭಾರಿ ಮಳೆಗೆ ರಾಜಧಾನಿಯ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಗಾಯಿತ್ರಿ ನಗರದಲ್ಲಿ 20ಕ್ಕೂ ಹೆಚ್ಚು ಮನೆಗಳಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ಕರೆಂಟ್ ಇಲ್ಲದೇ, ಜನರು ರಾತ್ರಿ ಕತ್ತಲಿನಲ್ಲಿಯೇ ಕಾಲ ಕಳೆಯುವಂತಾಯಿತು.

ಭಾರಿ ಮಳೆ: ಧರೆಗುರುಳಿದ ವಿದ್ಯುತ್ ಕಂಬಗಳು

ಮಲ್ಲೇಶ್ವರಂ ರೈಲ್ವೆ ಪ್ಯಾರಲಲ್ ರಸ್ತೆಯ ಗಾಯತ್ರಿ ನಗರದಲ್ಲಿ ತೆಂಗಿನ ಮರಗಳು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಸಂಪೂರ್ಣ ಮುರಿದು ಬಿದ್ದಿದ್ದು, 4ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ವಾಲಿವೆ. ಬೆಸ್ಕಾಂ‌ ಸಿಬ್ಬಂದಿ ರಾತ್ರಿ‌ ಮರ ತೆರವು ಮತ್ತು ವಿದ್ಯುತ್ ಕಂಬಗಳ ಜೋಡಣೆ ಕಾರ್ಯ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಘಟನೆಯಲ್ಲಿ ಎರಡು ಕಾರುಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಧಾರಾಕಾರ ಮಳೆ : ರಾಜ್ಯಾದ್ಯಂತ ಇನ್ನೂ ಎರಡು ದಿನ ವರ್ಷಧಾರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.