ಬೆಂಗಳೂರು: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನದ ಹಿನ್ನೆಲೆ ಏಳು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಇರಲಿದೆ.

ಮಾಜಿ ರಾಷ್ಟ್ರಪತಿಗಳ ಗೌರವಾರ್ಥವಾಗಿ ಆ.31ರಿಂದ ಸೆ.6ರ ವರೆಗೆ ಏಳು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು. ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಏಳು ದಿನಗಳ ಕಾಲ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ.