ETV Bharat / city

ಮಳೆ ನೀರಿನಿಂದ ಅನಾಹುತ ಆಗದಂತೆ ಪಾಲಿಕೆ ಮುನ್ನೆಚ್ಚರಿಕೆ ವಹಿಸಿದೆ: ಸಚಿವ ಅಶ್ವತ್ಥನಾರಾಯಣ - ಮಲ್ಲೇಶ್ವರಂ

ಕಾಂಕ್ರಿಟ್ ಜಂಗಲ್ ಆಗಿ ರೂಪಾಂತರಗೊಂಡಿರುವ ಬೆಂಗಳೂರು ನಗರದಲ್ಲಿ ಮಳೆ ನೀರು ಹರಿದು ಹೋಗಲು ಬಿಬಿಎಂಪಿ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸಚಿವ ಅಶ್ವತ್ಥನಾರಾಯಣ
ಸಚಿವ ಅಶ್ವತ್ಥನಾರಾಯಣ
author img

By

Published : Sep 3, 2021, 6:00 PM IST

ಬೆಂಗಳೂರು: ಮಳೆಯಿಂದ ನಗರದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇಂದು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬೆಂಗಳೂರು ಕಾಂಕ್ರಿಟ್ ಜಂಗಲ್ ಆಗಿ ರೂಪಾಂತರಗೊಂಡಿದ್ದು, ಮಳೆ ನೀರು ಹರಿದು ಹೋಗುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ನಗರದ ಎಲ್ಲ ವಲಯಗಳ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಿದ್ದಾರೆಂದು ತಿಳಿಸಿದರು.

ಇದನ್ನೂ ಓದಿ: ವಿಶ್ವಸಂಸ್ಥೆ ವೆಬ್​ಸೈಟ್​​ನಲ್ಲಿ ಮಂಗಳೂರು ಮೂಲದ ಪ್ರೀತಿ ಲೋಲಾಕ್ಷರ ವಿಚಾರ ಪ್ರಕಟ

ನಗರದ ಎಲ್ಲ ಭಾಗಗಳಲ್ಲೂ ನೀರು ತಗ್ಗು ಪ್ರದೇಶಗಳಿಗೆ ನುಗ್ಗದೇ ಕೆರೆಗಳತ್ತ ಹರಿದು ಹೋಗಬೇಕು, ರಸ್ತೆಗಳ ಆಜುಬಾಜಿನಲ್ಲೇ ಇಂಗು ಗುಂಡಿಗಳನ್ನು ಮಾಡಬೇಕು. ಪ್ರತಿ ಮನೆಯಲ್ಲೂ ಈಗಾಗಲೇ ಮಳೆಕೋಯ್ಲು ವ್ಯವಸ್ಥೆ ಇದೆ. ಅದು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ನೋಡಿಕೊಳ್ಳಲಾಗುತ್ತಿದೆ. ರಾಜಕಾಲುವೆಗಳಲ್ಲಿ ಎಲ್ಲೂ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಸ ಸಂಗ್ರಹಣೆಯಾಗಿ ಹರಿಯುವ ನೀರಿಗೆ ಅಡ್ಡಿ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಲ್ಲೇಶ್ವರಂನಲ್ಲಿ 2000 ಇಂಗು ಗುಂಡಿ

ಮಲ್ಲೇಶ್ವರಂನಲ್ಲೂ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗುತ್ತಿತ್ತು. ಇದಕ್ಕೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಕ್ಷೇತ್ರದ ಉದ್ದಗಲಕ್ಕೂ 2000ಕ್ಕೂ ಹೆಚ್ಚು ಇಂಗು ಗುಂಡಿ ನಿರ್ಮಾಣ ಮಾಡಿದ್ದೇವೆ. ರಸ್ತೆಗಳಲ್ಲಿ ಹರಿದು ಪೋಲಾಗುತ್ತಿದ್ದ ಮಳೆ ನೀರು ಭೂಮಿಗೆ ಸೇರುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕ್ಷೇತ್ರದ ಅತಿದೊಡ್ಡ ಕೆರೆಯಾದ ಸ್ಯಾಂಕಿ ಟ್ಯಾಂಕ್​ಗೆ ಏಳು ಕಡೆಗಳಿಂದ ನೀರು ಹರಿದು ಬರುವ ವ್ಯವಸ್ಥೆ ಮಾಡಲಾಗಿದೆ. ಈಗ ಮಲ್ಲೇಶ್ವರಂನ ಯಾವುದೇ ಭಾಗದಲ್ಲೂ ಮಳೆನೀರು ಮನೆಗಳಿಗೆ ನುಗ್ಗುತ್ತಿಲ್ಲ. ಈ ಬಗ್ಗೆ ನಮ್ಮ ಅಧಿಕಾರಿಗಳು ಸದಾ ಎಚ್ಚರಿಕೆ ವಹಿಸುತ್ತಿದ್ದಾರೆಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.