ETV Bharat / city

'ವಿದೇಶಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸಲು ಸರ್ಕಾರ ಬದ್ಧ'

ಕರ್ನಾಟಕದಲ್ಲಿರುವ ಎಲ್ಲ ಕಂಪನಿಗಳು ಕನ್ನಡಕ್ಕೆ ಮಾನ್ಯತೆ ನೀಡಬೇಕು. ಜತೆಗೆ ಕನ್ನಡಿಗ ಯುವಕರಿಕೆ ಆದ್ಯತೆ ನೀಡಬೇಕು. ಈ ಬಗ್ಗೆ ಯಾವ ಯಾವ ಹಂತದಲ್ಲಿ ಏನೇನು ಕಾರ್ಯಗಳಾಗಬೇಕು?, ಅವುಗಳನ್ನು ಮಾಡುವುದರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪರಿಣಾಮಕಾರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ- ಸಚಿವ ವಿ.ಸುನೀಲ್ ಕುಮಾರ್

Minister Sunil Kumar
ಸಚಿವ ವಿ.ಸುನೀಲ್ ಕುಮಾರ್
author img

By

Published : Sep 30, 2021, 7:35 PM IST

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ವಿದೇಶಿ ಕಂಪನಿಗಳನ್ನು ರಾಜ್ಯದಲ್ಲಿ ಬರಮಾಡಿಕೊಳ್ಳಲಾಗಿದೆ. ಅವುಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ರೀತಿಯ ಪ್ರಯತ್ನಗಳಾಗುತ್ತಿವೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 'ಬದಲಾದ ಉದ್ಯೋಗ ಪರ್ವ' ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 1984 ರಲ್ಲಿ ಬಂದಂತಹ ಡಾ.ಸರೋಜಿನಿ ಮಹಿಷಿ ವರದಿ, ಆ ಹೊತ್ತಿನ ಕಾಲಘಟ್ಟದ ಅಗತ್ಯತೆಗಳಿಗೆ ಮಾನ್ಯತೆ ನೀಡಿದೆ‌‌. ನಂತರದ ಕಾಲಘಟ್ಟದಲ್ಲಿ ಹೊಸ ಹೊಸ ಕಂಪನಿಗಳು ರಾಜ್ಯದಲ್ಲಿ ಸ್ಥಾಪನೆಯಾಗಿವೆ.

ಬದಲಾದ ಉದ್ಯೋಗ ಪರ್ವ' ವಿಚಾರ ಸಂಕಿರಣ
ಬದಲಾದ ಉದ್ಯೋಗ ಪರ್ವ' ವಿಚಾರ ಸಂಕಿರಣ

ಕರ್ನಾಟಕದಲ್ಲಿರುವ ಎಲ್ಲ ಕಂಪನಿಗಳು ಕನ್ನಡಕ್ಕೆ ಮಾನ್ಯತೆ ನೀಡಬೇಕು. ಜತೆಗೆ ಕನ್ನಡಿಗ ಯುವಕರಿಕೆ ಆದ್ಯತೆ ನೀಡಬೇಕು. ಈ ಬಗ್ಗೆ ಯಾವ ಯಾವ ಹಂತದಲ್ಲಿ ಏನೇನು ಕಾರ್ಯಗಳಾಗಬೇಕು?, ಅವುಗಳನ್ನು ಮಾಡುವುದರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪರಿಣಾಮಕಾರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ ಎಂದರು.

ಉದ್ಯೋಗ ಕ್ಷೇತ್ರದಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಹಾಗೂ ಕಾರ್ಮಿಕ ಇಲಾಖೆಯೊಂದಿಗೆ ಚರ್ಚಿಸಲಾಗುವುದು. ಇವತ್ತಿನ ವಿಚಾರ ಸಂಕಿರಣದ ವರದಿಯನ್ನು ನನಗೆ ತಲುಪಿಸಿದರೆ ಅದರ ಅನುಷ್ಠಾನದ ಕಾರ್ಯಗಳಿಗೆ ನಾನು ಸಹಕರಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಮಾತನಾಡಿ, ಕರ್ನಾಟಕ ರಾಜ್ಯದ ಐ.ಟಿ, ಬಿ.ಟಿ ಕ್ಷೇತ್ರಗಳನ್ನೊಳಗೊಂಡಂತೆ ಖಾಸಗಿ ವಲಯದಲ್ಲಿ ಸ್ಥಳೀಯ ಕನ್ನಡಿಗರಿಗೆ ಪ್ರಾತಿನಿಧ್ಯ ಕಲ್ಪಿಸುವ ಮಸೂದೆ ರೂಪಿಸಲು ಪ್ರಾಧಿಕಾರ ಸತತವಾಗಿ ಒತ್ತಾಯಿಸುತ್ತಿದೆ.

ಪ್ರಸ್ತಾಪಿತ ಮಸೂದೆಯಲ್ಲಿ ಲೋಕಲ್ ಪೀಪಲ್ (ಕನ್ನಡಿಗರು) ಎಂದರೆ ಕನ್ನಡವನ್ನು ಒಂದು ಭಾಷೆಯನ್ನಾಗಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಓದಿ ತೇರ್ಗಡೆ ಹೊಂದಿರಬೇಕು. ಅಥವಾ ಕರ್ನಾಟಕದಲ್ಲಿ 15 ವರ್ಷ ನೆಲೆಸಿದ್ದು, ಕನ್ನಡ ಓದಲು, ಬರೆಯಲು ಮಾತನಾಡಲು ಬರಬೇಕು ಎಂಬ ಅಂಶಗಳನ್ನು ಸೇರಿಸಬೇಕು.

ಉನ್ನತ ಶಿಕ್ಷಣ ಕ್ಯಾಂಪಸ್ ನೇಮಕಾತಿಯಲ್ಲಿ ಸ್ಥಳೀಯರಿಗೆ ಪ್ರಾತಿನಿಧ್ಯ ಕುರಿತಂತೆ ಅಂಶಗಳು ನಿಯಮಾವಳಿಯಲ್ಲಿ ಅಡಕವಾಗಬೇಕು. ಸಿ ಮತ್ತು ಡಿ ಹುದ್ದೆಗಳಲ್ಲಿ ಶೇ.100 ರ ಪ್ರಾತಿನಿಧ್ಯದ ಜತೆ ಮೇಲುಸ್ತುವಾರಿ ಉನ್ನತ ಹುದ್ದೆಗಳಲ್ಲಿಯೂ ಸ್ಥಳೀಯರು ಪ್ರಾತಿನಿಧ್ಯ ಪಡೆಯುವ ಬಗ್ಗೆ ಅಂಶಗಳು ಸೇರಬೇಕು ಎಂದು ಒತ್ತಾಯಿಸಿದರು.

ಸ್ಥಳೀಯರಿಗೆ ನೇಮಕಾತಿ ಪ್ರಾತಿನಿಧ್ಯ ಕಲ್ಪಿಸದ ಸಂಸ್ಥೆಗಳ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸ್ಪಷ್ಟವಾದ ಕಾನೂನು ಬಲವುಳ್ಳ ಅಂಶಗಳು ಪ್ರಸ್ತಾಪಿತ ನಿಯಮಾವಳಿಗಳಲ್ಲಿ ಅಡಕವಾಗಬೇಕು. ಖಾಸಗಿ ಸಂಸ್ಥೆಗಳ ಸ್ಥಾಪನೆಯ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯೊಂದಿಗೆ ಒಡಂಬಡಿಕೆಯನ್ನು ಸ್ಥಳೀಯರಿಗೆ ಉದ್ಯೋಗ ಎಂಬ ಷರತ್ತನ್ನು ಒಪ್ಪಿರುತ್ತವೆ. ಇದರ ಉಲ್ಲಂಘನೆ ಯಾವ ರೀತಿಯ ಕ್ರಮವಹಿಸಬೇಕು ಎಂಬುದರ ಬಗ್ಗೆ ಕಾಯ್ದೆ ರೂಪಿಸಬೇಕಾಗಿದೆ ಎಂದು ತಿಳಿಸಿದರು.

ಐಟಿ,ಬಿಟಿ, ಇ-ಕಾಮರ್ಸ್ ಕ್ಷೇತ್ರಗಳನ್ನೊಳಗೊಂಡಂತೆ ಎಲ್ಲ ಖಾಸಗಿ ಸಂಸ್ಥೆಗಳು ರಾಜ್ಯದ ಮೂಲಭೂತ ಸೌಲಭ್ಯಗಳಾದ ರಸ್ತೆ, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಮಾನವ ಸಂಪನ್ಮೂಲ ಹಾಗೂ ಇತ್ಯಾದಿ ಸೌಲಭ್ಯಗಳನ್ನು ಬಳಸಿಕೊಳ್ಳುವುದರಿಂದ ಎಲ್ಲ ಖಾಸಗಿ ವಲಯದ ಉದ್ಯಮಗಳನ್ನು ಈ ವ್ಯಾಪ್ತಿಗೆ ತಂದು ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸಬೇಕು ಎಂದು ನಾಗಾಭರಣ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ತಾಂತ್ರಿಕ ಕೋಶದ ಜಂಟಿ ನಿರ್ದೇಶಕ ಹೆಚ್.ಎಸ್ ಜಯಕುಮಾರ್ ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.