ETV Bharat / city

ಸಂಪುಟ ವಿಸ್ತರಣೆ ವಿಷಯಕ್ಕೂ ಮೊದಲು ರಾಜ್ಯದ ಅಭಿವೃದ್ಧಿ ಕೆಲಸಕ್ಕೆ ಪ್ರಾಮುಖ್ಯತೆ: ಸಿಎಂ ಬೊಮ್ಮಾಯಿ - ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ

ಹೈಕಮಾಂಡ್ ಯಾವಾಗ ಹೇಳುತ್ತೋ ಆಗ ದೆಹಲಿಗೆ ಹೋಗುತ್ತೇನೆ. ಆದರೆ ಸಂಪುಟ ವಿಷಯಕ್ಕೂ ಮೊದಲು ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆ ಕೊಡುತ್ತೇನೆ ಎಂದು ಸಿಎಂ ತಿಳಿಸಿದರು.

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
author img

By

Published : Apr 19, 2022, 10:36 AM IST

Updated : Apr 19, 2022, 11:46 AM IST

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಷಯಕ್ಕೂ ಮೊದಲು ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಪ್ರಾಮಖ್ಯತೆ ಕೊಡುತ್ತೇನೆ.‌ ಹೈಕಮಾಂಡ್ ನಾಯಕರು ಆಹ್ವಾನಿಸಿದಾಗ ನವದೆಹಲಿಗೆ ತೆರಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾ ಪ್ರವಾಸಕ್ಕೆ ತೆರಳುವ ಮುನ್ನ ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ಹೋಗುತ್ತಿದ್ದೇನೆ‌. ಇಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಇದೆ. ಶೃಂಗೇರಿ ಮತ್ತು ಹರಿಹರಪುರಕ್ಕೆ ಹೋಗುತ್ತಿದ್ದೇನೆ. ಶಿವಮೊಗ್ಗದಲ್ಲಿ ಪಕ್ಷದ ವಿವಿಧ ಸಂಘಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ. ನಾಳೆ ಕಲಬುರಗಿ ಜಿಲ್ಲೆಯ ಭೇಟಿ ಇದ್ದು, ಹಲವಾರು ಅಭಿವೃದ್ಧಿ ಜೊತೆಗೆ ಪಕ್ಷಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವಿದೆ. ಕಾರಜೋಳ ಮತ್ತು ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ನೀರಾವರಿಗೆ ಸಂಬಂಧಿಸಿದಂತೆ ಇರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೇನೆ ಎಂದರು.

ಸಿಎಂ ಬೊಮ್ಮಾಯಿ

ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಹೈಕಮಾಂಡ್ ಯಾವಾಗ ಹೇಳುತ್ತೋ ಆಗ ದೆಹಲಿಗೆ ಹೋಗುತ್ತೇನೆ. ಆದರೆ ಸಂಪುಟ ವಿಷಯಕ್ಕೂ ಮೊದಲು ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಾಮುಖ್ಯತೆ ಕೊಡುತ್ತೇನೆ ಎಂದು ತಿಳಿಸಿದರು. ಹುಬ್ಬಳ್ಳಿ ಗಲಾಟೆ ವಿಚಾರವಾಗಿ ಈಗಾಗಲೇ ತನಿಖೆ ನಡೆಯುತ್ತಿದೆ. ಯಾರೇ ತಪ್ಪು ಮಾಡಿದರೂ ಅವರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಯಾರು ಕಾನೂನು ಕೈಗೆ ತೆಗೆದಕೊಳ್ಳುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದು ಅಕ್ಷಮ್ಯ ಅಪರಾಧ. ಅವರ ವಿರುದ್ಧವಾಗಿ ಖಂಡಿತವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಖಡಕ್​ ಎಚ್ಚರಿಕೆ ರವಾನಿಸಿದರು.

(ಇದನ್ನೂ ಓದಿ: 'ದಿಂಗಾಲೇಶ್ವರ ಶ್ರೀಗಳು ಕಮಿಷನ್‌ ಬಗ್ಗೆ ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡ್ತೇವೆ')

Last Updated : Apr 19, 2022, 11:46 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.