ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಹಿತರಕ್ಷಣಾ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ಲಕ್ಷ್ಮಣ್ ನಾಯ್ಕ್, ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಹಿತರಕ್ಷಣಾ ಸಂಘದ ಪ್ರಧಾನ ಕಾರ್ಯದರ್ಶಿ ಸೈದಪ್ಪ ಕೆ.ಗುತ್ತೇದಾರ್ ನೇತೃತ್ವದಲ್ಲಿ 2ಎ ಮೀಸಲಾತಿ ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ಇಂದು ಗಾಂಧಿ ಭವನದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು.
ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಎಂ.ಡಿ ಲಕ್ಷ್ಮಿನಾರಾಯಣ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಈ ಸಾಲಿನ ಬಜೆಟ್‍ನಲ್ಲಿ ಹಿಂದುಳಿದ ಸಮುದಾಯಕ್ಕೆ ಕೇವಲ 500 ಕೋಟಿ ರೂ. ನೀಡಿರುವುದು ಸರಿಯಲ್ಲ. ಬಸವಣ್ಣನ ಅನುಭವ ಮಂಟಪಕ್ಕೆ 500 ಕೋಟಿ ರೂ. ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಘೋಷಣೆ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸುಮಾರು 300ಕ್ಕೂ ಹೆಚ್ಚು ಸಮುದಾಯಗಳು ಬರಲಿವೆ. ಕೇವಲ 500 ಕೋಟಿ ನೀಡಿರುವುದು ಸರಿಯಲ್ಲ. ಈ ಸಂಬಂಧ ಇದೇ 17 ರಂದು ಮೀಸಲಾತಿ ವಿಚಾರ ಕುರಿತಂತೆ ಸಭೆ ನಡೆಯಲಿದೆ.
ಈ ಸಭೆಯಲ್ಲಿ 2ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯವನ್ನು ಸೇರಿಸುವುದರಿಂದ ಹಿಂದುಳಿದ ವರ್ಗಗಳ ಕೆಳ ಸಮುದಾಯಕ್ಕೆ ಹೊಡೆತ ಬೀಳಲಿದೆ. ಹೀಗಾಗಿ, ಚರ್ಚೆ ನಡೆಸಿ, ಬೃಹತ್ ಹೋರಾಟ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ನಂತರ ಅಧ್ಯಕ್ಷ ಸೈದಪ್ಪ ಗುತ್ತಿದಾರ್ ಮಾತನಾಡಿ, ಹಿಂದುಳಿದ ವರ್ಗಗಳ 2ಎ ಪ್ರವರ್ಗದಲ್ಲಿ 362 ಜಾತಿಗಳು ಬರಲಿವೆ. ಈವರೆಗೂ ಕೇವಲ ಒಂದೆರಡು ಪ್ರಬಲ ಸಮುದಾಯಗಳು ಶೇ. 15ರಷ್ಟು ಮೀಸಲಾತಿ ಲಾಭ ಪಡೆದವರಾಗಿದ್ದಾರೆ. ಹಿಂದುಳಿದ ವರ್ಗದಲ್ಲಿ ಕೆಳ ಸಮುದಾಯಗಳು ಸರ್ಕಾರದ ಸವಲತ್ತು, ಸೌಲಭ್ಯಗಳಿಂದ ವಂಚಿತರಾಗಿ ಹಾಗೇ ಉಳಿದಿದ್ದಾರೆ.
ರಾಜ್ಯದಲ್ಲಿ ಮೀಸಲಾತಿ ಕೂಗು ಎದ್ದಿರುವ ಸಂದರ್ಭದಲ್ಲಿ ಪ್ರಬಲ ಸಮುದಾಯಗಳು 2ಎ ಮೀಸಲಾತಿ ಒಳಗಡೆ ಬರುವುದರಿಂದ ಈಗಾಗಲೇ ಇರುವ ಕೆಳ ಸಮುದಾಯಗಳ ಮೇಲೆ ಪರಿಣಾಮ ಬೀಳಲಿದೆ. ಈ ಬಗ್ಗೆ ನಾವು ಮುಂದಿನ ಹೋರಾಟ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಹಿಂದುಳಿದ ವರ್ಗಗಳ 2ಎ ಪ್ರವರ್ಗದಲ್ಲಿ 362 ಜಾತಿಗಳು ಇದರಲ್ಲಿ ಈವರೆಗೂ ಕೇವಲ ಒಂದೆರಡು ಪ್ರಬಲ ಸಮುದಾಯಗಳು ಶೇ.15ರಷ್ಟು ಮೀಸಲಾತಿಯಲ್ಲಿ ಬಹುಪಾಲು ಲಾಭ ಪಡೆದವರು. ಹಿಂದುಳಿದ ವರ್ಗದಲ್ಲಿ ಇನ್ನು ಕೆಲ ಸಮುದಾಯಗಳಿಗೆ ಸರ್ಕಾರದ ಸವಲತ್ತು, ಸೌಲಭ್ಯಗಳಿಂದ ವಂಚಿತರಾಗಿ ಹಾಗೆಯೇ ಉಳಿದಿದ್ದಾರೆ.
ರಾಜ್ಯದಲ್ಲಿ ಮೀಸಲಾತಿ ಕೂಗು ಎದ್ದಿರುವ ಇಂತಹ ಸಂದರ್ಭದಲ್ಲಿ ಪ್ರಬಲ ಸಮುದಾಯಗಳು 2ಎ ಮೀಸಲಾತಿ ಒಳಗಡೆ ಬರುವುದರಿಂದ ಈಗಾಗಲೇ ಇರುವ ಕೆಳ ಸಮುದಾಯಗಳ ಮೇಲೆ ಎಂತಹ ಪರಿಣಾಮ ಬೀರಲಿದೆ ಎಂಬ ಬಗ್ಗೆ ಪರ್ಯಾಯಲೋಚಿಸಬೇಕಿದೆ. ಈ ಹಿನ್ನಲೆ ಎಲ್ಲ ಜನಾಂಗದವರನ್ನೊಳಗೊಂಡ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.
ಈ ಸಮಾರಂಭದಲ್ಲಿ ಈಡಿಗ ಸಮಾಜದ ಹಿರಿಯ ಮುಖಂಡ, ಮಾಜಿ ರಾಜ್ಯ ಸಭಾ ಸದಸ್ಯರು, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ ಎಂ ರಾಮಚಂದ್ರಪ್ಪ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ನೆ ಲ ನರೇಂದ್ರ ಬಾಬು, ಮಾಜಿ ಶಾಸಕರಾದ ಸತೀಶ್ ಸೈಲ್, ಅಧ್ಯಕ್ಷ ಮಂಜುನಾಥ್ ಲಕ್ಷ್ಮಣ ನಾಯ್ಕ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ, ಮತ್ತಿತರರು ಭಾಗವಹಿಸಿದ್ದರು.