ಬೆಂಗಳೂರು: ನೂತನವಾಗಿ ಸ್ಥಾಪಿಸಿರುವ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಿ.ಎಸ್.ಪರಮಶಿವಯ್ಯರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗಷ್ಟೇ ಹೊಸದಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಆದೇಶ ಹೊರಡಿಸಿದ್ದ ಸಿಎಂ ಯಡಿಯೂರಪ್ಪ ನಂತರ 500 ಕೋಟಿ ರೂ.ಗಳ ಅನುದಾನ ಮೀಸಲಿರಿಸುವಂತೆ ಆದೇಶಿಸಿದ್ದರು. ವ್ಯವಸ್ಥಾಪಕ ನಿರ್ದೇಶಕರ ನೇಮಕದವರೆಗೆ ಕಾರ್ಯ ನಿರ್ವಹಿಸಲು ಹಿಂದುಳಿದ ವರ್ಗಗಳ ಆಯುಕ್ತರಿಗೆ ಜವಾಬ್ದಾರಿ ವಹಿಸಿ ನಿನ್ನೆಯಷ್ಟೇ ಆದೇಶ ಹೊರಡಿಸಿದ್ದು ಇಂದು ಅಧ್ಯಕ್ಷರ ನೇಮಕ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ.
ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ರೂ. ಕೋಟಿ ಅನುದಾನ
ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವ ಪರಮಶಿವಯ್ಯ ಅಖಿಲ ಭಾರತ ವೀರಶೈವ ಮಹಾಸಭಾದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದು ಸಮಾಜದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಸಮುದಾಯಕ್ಕೆ ಅವರು ನೀಡಿರುವ ಕೊಡುಗೆ ಪರಿಗಣಿಸಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗುತ್ತಿದೆ.