ETV Bharat / city

ಬೆಂಗಳೂರು ಪ್ರವಾಸ ಮುಗಿಸಿ ಗೋವಾಗೆ ಪ್ರಯಾಣ ಬೆಳೆಸಿದ ರಾಷ್ಟ್ರಪತಿ ಕೋವಿಂದ್​

ಎರಡು ದಿನಗಳ ಬೆಂಗಳೂರು ಪ್ರವಾಸ ಮುಗಿಸಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಇಂದು ಸಂಜೆ ಎಚ್​ಎಎಲ್​ ವಿಮಾನ ನಿಲ್ದಾಣ ಮೂಲಕ ಗೋವಾಕ್ಕೆ ಪ್ರಯಾಣ ಬೆಳೆಸಿದರು.

ಬೆಂಗಳೂರು ಪ್ರವಾಸ ಮುಗಿಸಿದ ರಾಷ್ಟ್ರಪತಿ ಕೋವಿಂದ್​ ಗೋವಾಕ್ಕೆ ಪ್ರಯಾಣ

author img

By

Published : Jun 14, 2022, 9:52 PM IST

ಬೆಂಗಳೂರು: 2 ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಮಹಿಳಾ ಪ್ರಥಮ ಪ್ರಜೆ ಸವಿತಾ ಕೋವಿಂದ್ ಅವರು ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದಿಂದ (ಇಸ್ಕಾನ್‌) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ‍ಗೋವಿಂದ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇಂದು ಸಂಜೆ ಎಚ್​ಎಎಲ್ ವಿಮಾನ ನಿಲ್ದಾಣದಿಂದ ಗೋವಾಕ್ಕೆ ಪ್ರಯಾಣ ಕೈಗೊಂಡರು.

ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಏರ್ ಮಾರ್ಷಲ್ ಮನವೇಂದ್ರ ಸಿಂಗ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಪ್ರವೀಣ್ ಸೂದ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತರಾದ ಗೌರವ ಗುಪ್ತ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಕಾರ್ಯದರ್ಶಿ ಹೇಮಲತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಇತರ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಆಧುನಿಕ ಯಾತ್ರಾಸ್ಥಳವಾಗಲಿದೆ ರಾಜಾಧಿರಾಜ ಗೋವಿಂದ ದೇವಸ್ಥಾನ: ರಾಷ್ಟ್ರಪತಿ ಕೋವಿಂದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.