ETV Bharat / city

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಜ್ಯಕ್ಕೆ ಆಗಮನ - ರಮಾನಾಥ್ ಕೋವಿಂದ್ ಸುದ್ದಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

kovind
kovind
author img

By

Published : Oct 6, 2021, 12:18 AM IST

Updated : Oct 6, 2021, 6:51 AM IST

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು (ಬುಧವಾರ) ರಾಜ್ಯಕ್ಕೆ ಆಗಮಿಸುತ್ತಿದ್ದು, ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ಮಧ್ಯಾಹ್ನ 12:45ಕ್ಕೆ ವಿಶೇಷ ವಿಮಾನದ ಮೂಲಕ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಳ್ಳಲಿದ್ದಾರೆ.

ಆಕ್ಟೊಬರ್ 7 ರಂದು ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಚಾಮರಾಜನಗರ ಜಿಲ್ಲೆಯಲ್ಲಿ 450 ಬೆಡ್ ಸಾಮರ್ಥ್ಯದ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಗ್ಯ ಸಚಿವ ಸುಧಾಕರ್ ಸಾಥ್ ಕೊಡಲಿದ್ದಾರೆ.

ಈ ಕಾರ್ಯಕ್ರಮದ ಬಳಿಕ ಮೈಸೂರು, ಮಂಗಳೂರಿಗೆ ತೆರಳುವ ಅವರು ಅಕ್ಟೊಬರ್ 8 ರಂದು ಚಿಕ್ಕಮಗಳೂರು ಜಿಲ್ಲೆಯ ಶಾರದಾ ಪೀಠಕ್ಕೆ ಭೇಟಿ ನೀಡಿ, ಶ್ರೀಗಳಿಂದ ಆಶೀರ್ವಾದ ಪಡೆಯಲಿದ್ದಾರೆ. ಅಂದೇ ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

Last Updated : Oct 6, 2021, 6:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.