ETV Bharat / city

ಬೆಂಗಳೂರಿಗೆ ರಾಷ್ಟ್ರಪತಿ ಆಗಮನ: ರಾಜ್ಯಪಾಲ, ಸಿಎಂರಿಂದ ಸ್ವಾಗತ - Bengaluru latest News

ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಲ್ಕು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಇಂದು ಬೆಂಗಳೂರಿಗೆ ಆಗಮಿಸಿದರು.

Bengaluru
ಬೆಂಗಳೂರಿಗೆ ರಾಷ್ಟ್ರಪತಿ ಆಗಮನ
author img

By

Published : Feb 4, 2021, 8:36 PM IST

Updated : Feb 4, 2021, 10:02 PM IST

ಬೆಂಗಳೂರು: ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಲ್ಕು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಭಾರತೀಯ ವಾಯು ಪಡೆಯ ವಿಶೇಷ ವಿಮಾನದಲ್ಲಿ ಸಂಜೆ ಬೆಂಗಳೂರಿಗೆ ಆಗಮಿಸಿದರು.

ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ್​ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಗರದ ಹೆಚ್​ಎಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Last Updated : Feb 4, 2021, 10:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.