ETV Bharat / city

ಫಸಲ್ ಭೀಮಾ ಯೋಜನೆ ಭಾಗವಾಗಿ ನನ್ನ ಪಾಲಿಸಿ ನನ್ನ ಕೈಯಲ್ಲಿ ವಿಮಾ ಪಾಲಿಸಿ- ಸಚಿವ ಬಿ.ಸಿ. ಪಾಟೀಲ್

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ನಾವು 'ನನ್ನ ಪಾಲಿಸಿ ನನ್ನ ಕೈಯಲ್ಲಿ' ಎಂಬ ಬೆಳೆ ವಿಮೆ ಪಾಲಿಸಿ ವಿತರಣಾ ಅಭಿಯಾನ ಪ್ರಾರಂಭಿಸಲಾಗುವುದು..

Process to expand Fasal Insurance Plan range
ಫಸಲ್ ಭೀಮಾ ಯೋಜನೆ ಭಾಗವಾಗಿ ನನ್ನ ಪಾಲಿಸಿ ನನ್ನ ಕೈಯಲ್ಲಿ ವಿಮಾ ಪಾಲಿಸಿ- ಬಿ.ಸಿ. ಪಾಟೀಲ್
author img

By

Published : Feb 27, 2022, 12:37 PM IST

ಯಲಹಂಕ(ಬೆಂಗಳೂರು) : ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು 'ನನ್ನ ಪಾಲಿಸಿ ನನ್ನ ಕೈಯಲ್ಲಿ' ಎಂಬ ಬೆಳೆ ವಿಮೆ ಪಾಲಿಸಿ ವಿತರಣಾ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಬಿ‌ ಸಿ ಪಾಟೀಲ್ ತಿಳಿಸಿದರು.

ಬೆಂಗಳೂರಿನ ಜಿಕೆವಿಕೆಯ ಬಿ.ಹೆಚ್.ಎಸ್ ಕಾಲೇಜಿನ ಆಡಿಟೋರಿಯಂ‌ನಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಪ್ರಾಕೃತಿಕ ವಿಕೋಪಗಳಿಂದ ಹಾನಿಯಾಗುವ ಬೆಳೆಗಳಿಗೆ ವಿಮಾ ಭದ್ರತಾ ಕವಚ ಒದಗಿಸುವುದು ನಮ್ಮ ಸಂಕಲ್ಪವಾಗಿದೆ.

ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರುವ ಯೋಜನೆ ಇದಾಗಿದೆ. 2021-22ರ ಹಿಂಗಾರು ಹಂಗಾಮಿನಲ್ಲಿ ನೋಂದಣಿ ಮಾಡಿದಂತಹ ರೈತರಿಗೆ ತಮ್ಮ ಪಾಲಿಸಿ ವಿವರವನ್ನು Inland Letter ನಮೂನೆಯಲ್ಲಿ ವಿತರಿಸುವ ಕಾರ್ಯಕ್ರಮ ಇದಾಗಿದೆ.

2021ರ ಮುಂಗಾರು ಹಂಗಾಮಿನಲ್ಲಿ 113.49 ಕೋಟಿ ರೂ. ಬೆಳೆ ವಿಮಾ ಪರಿಹಾರ ಮೊತ್ತವು ಇತ್ಯರ್ಥವಾಗಿದೆ. 2016-17 ಹಾಗೂ 2017-18ರ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ವಿಮಾ ಪರಿಹಾರ ಮೊತ್ತವು ರೈತರ ಬ್ಯಾಂಕ್ ಖಾತೆ ಹಾಗೂ ಆಧಾರ್ ಸಂಖ್ಯೆ ಲಭ್ಯವಿಲ್ಲದ ಕಾರಣ ತಿರಸ್ಕೃತಗೊಂಡಿದೆ. 100.24 ಕೋಟಿ ರೂಪಾಯಿ ಹಣ ESCROW ಖಾತೆಯ ಮೂಲಕ 1.27 ಲಕ್ಷ ಅರ್ಹ ರೈತ ಫಲಾನುಭವಿಗಳಿಗೆ ತಲುಪಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡರು ಜನರನ್ನು ಮುರ್ಖರನ್ನಾಗಿ ಮಾಡುತ್ತಿದ್ದಾರೆ : ಸಚಿವ ಡಾ. ಸುಧಾಕರ್

ಕಳೆದ ಬಾರಿ ನಡೆದ ಸಭೆಯಲ್ಲಿ ವಿಮಾ ಸಂಸ್ಥೆಯವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರ ಫಲವಾಗಿ ಒಂದೇ ತಿಂಗಳಿನಲ್ಲಿ 43,89 ಕೋಟಿ ರೂಪಾಯಿ ಪರಿಹಾರ ಮೊತ್ತವನ್ನು 33,160 ರೈತರಿಗೆ ಇತ್ಯರ್ಥಪಡಿಸಿದ್ದಾರೆ.

NPCI Validation ವೈಫಲ್ಯದಿಂದಾಗಿ ಹಲವಾರು ರೈತರಿಗೆ ಬೆಳೆವಿಮಾ ಪರಿಹಾರ ಮೊತ್ತ ಇತ್ಯರ್ಥವಾಗದ ಕಾರಣ ಎಲ್ಲಾ ರೈತರು ಕಡ್ಡಾಯವಾಗಿ ಆಧಾರವನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಕೊಳ್ಳಲೇಬೇಕೆಂದು ಸಚಿವರು ಪುನರುಚ್ಚರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.