ಬೆಂಗಳೂರು: ಎಲಿವೆಟೆಡ್ ಕಾರಿಡಾರ್ ವಿರೋಧಿಸಿ ನಡೆದ ಪ್ರತಿಭಟನೆ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗೆ ಟ್ರಾಫಿಕ್ ಬಹುದೊಡ್ಡ ಸಮಸ್ಯೆಯಾಗಿದೆ. ಹಾಗಾಗಿ ಇದಕ್ಕೆ ಎಲಿವೆಟೆಡ್ ಕಾರಿಡಾರ್ ಪರಿಹಾರ. ಆದರೆ ಕೆಲವು ನಾಗರಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿವೆ. ಅವರೆಲ್ಲಾ ನಮ್ಮ ಬಳಿ ಬಂದು ತಮ್ಮ ಕಾಳಜಿ ವ್ಯಕ್ತಪಡಿಸಲಿ. ನಿಮ್ಮ ಪ್ರತಿಕ್ರಿಯೆಯನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುವುದಾಗಿ ಟ್ವೀಟ್ ಮಾಡಿದ್ದಾರೆ.