ಬೆಂಗಳೂರು : ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಆದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ಮಾಡುವುದಾಗಿ ಈ ಹಿಂದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಮರು ಪರೀಕ್ಷೆ ಆದೇಶವನ್ನು ಹಿಂಪಡೆಯಬೇಕು ಮತ್ತು ಅಕ್ರಮದಲ್ಲಿ ಭಾಗಿ ಆಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟಿಸಲಾಯಿತು. ಪ್ರತಿಭಟನೆಯಲ್ಲಿ 300ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು ಪೋಷಕರು ಇದ್ದರು.
ಮುಖ್ಯಮಂತ್ರಿ ಭೇಟಿ : ಪ್ರತಿಭಟನೆ ನಡೆಯುತ್ತಿದ್ದ ಫ್ರೀಡಂ ಪಾರ್ಕ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಪಿಎಸ್ಐ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ. ಯಾರೆಲ್ಲಾ ಭಾಗಿಯಾಗಿದ್ದಾರೆ ಎಲ್ಲರಿಗೂ ಶಿಕ್ಷೆ ಖಂಡಿತವಾಗಿಯೂ ಆಗುತ್ತದೆ. ತನಿಖೆ ಆಗುವವರೆಗೂ ಕೂಡ ಪಿಎಸ್ಐ ಅಭ್ಯರ್ಥಿಗಳು ಸಮಾಧಾನವಾಗಿ ಇರಿ. ನಾವು ಈಗ ಯಾವುದೇ ಭರವಸೆ ಕೊಡಲು ಸಾಧ್ಯ ಇಲ್ಲ. ತನಿಖೆ ಮುಗಿಯೋವರೆಗೂ ಕೂಡ ಭರವಸೆ ಕೊಡಲ್ಲ. ಮನವಿ ಪತ್ರವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡುತ್ತೇನೆ ಎಂದರು.
ಸಂಘಟನೆಗಳಿಂದ ಬೆಂಬಲ : ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇಂದಿನ ಪ್ರತಿಭಟನೆಗೆ ಸಮತಾ ಸೈನಿಕ ದಳ, ದಲಿತಪರ ಸಂಘಟನೆಗಳು, ರೈತಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಳು ಅಭ್ಯರ್ಥಿಗಳಿಗೆ ಸಾಥ್ ನೀಡಿದರು.
ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟ, ನಾಲ್ವರ ಸಾವು