ಬೆಂಗಳೂರು : ಪಿಎಸ್ಐ ಪರೀಕ್ಷಾ ಅಕ್ರಮದಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಜೀವನಕ್ಕೆ ಮಂಕು ಕವಿದಿದೆ. ಅಕ್ರಮ ನಡೆದಿರುವುದು ರುಜುವಾತು ಆಗುತ್ತಿದ್ದಂತೆ ಮರುಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾಸಿದೆ. ಮತ್ತೊಂದೆಡೆ ನ್ಯಾಯಯುತವಾಗಿ ಪರೀಕ್ಷೆ ಬರೆದು ನೇಮಕವಾಗಿದ್ದ ಅಭ್ಯರ್ಥಿಗಳು ಮನನೊಂದ ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ ಬರೆದ್ದಾರೆ.
ಪಿಎಸ್ಐ ಪರೀಕ್ಷೆಯಲ್ಲಿ ಆಯ್ಕೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಬೇಕು. ಅಲ್ಲದೇ 2021ರಲ್ಲಿ ನಡೆದ ಎಫ್ಡಿಎ ಪರೀಕ್ಷೆಯಲ್ಲಿ ಅಕ್ರಮವಾಗಿದೆ. ಅದನ್ನು ಕೂಡ ತನಿಖೆ ಮಾಡಿ ನ್ಯಾಯ ಕೊಡಿಸಬೇಕು. ಪ್ರಧಾನಿ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅಕ್ರಮದ ಬಗ್ಗೆ ತನಿಖೆ ಮಾಡಿಸಿ ನ್ಯಾಯ ಕೊಡಿಸುತ್ತಾರೆ ಎಂಬ ನಂಬಿಕೆಯಿದೆ.
ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣವಿದ್ದವರಿಗೆ ಎಂಬ ವ್ಯವಸ್ಯೆ ಬಂದುಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತು ಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆ ಬರೆಯುವುದಿಲ್ಲ. ಒಂದು ವೇಳೆ ನಮಗೆ ನ್ಯಾಯ ಸಿಗದಿದ್ದರೆ ಉಗ್ರಗಾಮಿ ಸಂಘಟನೆಗೆ ಸೇರುತ್ತೇವೆ.
ಅವರ ಬಳಿ ಹಣ ಪಡೆದು ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ. ನಾವು 8 ಮಂದಿಯಿದ್ದೇವೆ. ನಾವೆಲ್ಲರೂ ಈ ನಿರ್ಧಾರ ಮಾಡಿದ್ದಾಗಿ ಪ್ರಧಾನಿಗೆ ಎರಡು ಪುಟಗಳ ಪತ್ರ ಬರೆದ್ದಾರೆ. ಸದ್ಯ ಈ ಪತ್ರ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ ಹಿನ್ನೆಲೆ, ಅಭ್ಯರ್ಥಿಗಳಿಗೆ ಮರುಪರೀಕ್ಷೆ: ಗೃಹ ಸಚಿವ ಆರಗ ಜ್ಞಾನೇಂದ್ರ