ETV Bharat / city

ಪಿಎಸ್ಐ ನೇಮಕಾತಿ ಅಕ್ರಮ: ದಿವ್ಯಾ ಹಾಗರಗಿ ಸೇರಿ ಹಲವರಿಂದ ಅಜ್ಞಾತಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ - ದಿವ್ಯಾ ಹಾಗರಗಿ ಅವರಿಂದ ಜಾಮೀನು ಅರ್ಜಿ

ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸುತ್ತಿದ್ದಂತೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅಜ್ಞಾತಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Psi scam : accused plea to Anticipatory bail
ಪಿಎಸ್ಐ ನೇಮಕಾತಿ ಅಕ್ರಮ: ದಿವ್ಯಾ ಹಾಗರಗಿ ಸೇರಿ ಹಲವರಿಂದ ಅಜ್ಞಾತಸ್ಥಳದಿಂದಲೇ ನೀರಿಕ್ಷಣಾ ಜಾಮೀನಿಗೆ ಅರ್ಜಿ
author img

By

Published : Apr 21, 2022, 7:33 AM IST

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ, ಜ್ಞಾನಜ್ಯೋತಿ ಶಾಲೆಯ ಕಾರ್ಯದರ್ಶಿ ದಿವ್ಯಾ ಹಾಗರಗಿ ಅಜ್ಞಾತಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸುತ್ತಿದ್ದಂತೆ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಒಂದು ವಾರವಾದರೂ ವಿಚಾರಣೆಗೆ ಹಾಜರಾಗಿಲ್ಲ. ಮನೆ ಮೇಲೆ ದಾಳಿ ಮಾಡಿ ದಿವ್ಯಾ ಅವರ ಪತಿ ರಾಜೇಶನನ್ನು ಬಂಧಿಸಿದರೂ ಇಲ್ಲಿಯವರೆಗೆ ದಿವ್ಯಾ ಪತ್ತೆಯಾಗಿಲ್ಲ.

ಸದ್ಯ ಸಿಐಡಿ ಪೊಲೀಸರ ಬಂಧನದ ಭೀತಿಯಿಂದಾಗಿ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಕೀಲರ ಮೂಲಕ ಕಲಬುರಗಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆಯಾಗಿದೆ. ದಿವ್ಯಾ ಹಾಗರಗಿ ಅಲ್ಲದೆ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್, ಸಹ ಶಿಕ್ಷಕಿ ಅಶ್ವಿನಿ‌ ಕೂಡಾ ಸಿಐಡಿ ಕೈಗೆ ಸಿಗದೆ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇವರಷ್ಟೇ ಅಲ್ಲದೆ, ಸಿಐಡಿಯಿಂದ ಈಗಾಗಲೇ ಬಂಧನಕ್ಕೊಳಗಾಗಿರುವ ಜ್ಞಾನ ಜ್ಯೋತಿ ಶಾಲೆಯ ಪರೀಕ್ಷಾ ಮೇಲ್ವಿಚಾರಕರೂ ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬೆಂಗಳೂರು ಭೇಟಿ; ಬೃಹತ್ ಸಮಾವೇಶದೊಂದಿಗೆ ರಾಜ್ಯ ಚುನಾವಣೆಗೆ ಆಪ್ ರಣಕಹಳೆ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.