ETV Bharat / city

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಪಿಯು ಬೋರ್ಡ್ ಸಜ್ಜು - ಪಿಯು ಬೋರ್ಡ್ ಸಿದ್ಧತೆ

ಪರೀಕ್ಷಾ ಕೇಂದ್ರದ ಸುತ್ತ ಸಂಪೂರ್ಣ ಪೊಲೀಸ್ ಬಂದೋಬಸ್ತ್ ಒದಗಿಸಲು ಪೊಲೀಸ್ ಇಲಾಖೆಗೆ ಪಿಯು ಬೋರ್ಡ್ ಮನವಿ ಮಾಡಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳು ಸಂಪೂರ್ಣವಾಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಮಾಡಲಾಗುತ್ತಿದೆ..

PU board ready for conduct second PUC exam systematically
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಪಿಯು ಬೋರ್ಡ್ ಸಜ್ಜು
author img

By

Published : Apr 20, 2022, 7:11 PM IST

ಬೆಂಗಳೂರು : ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು, ಅಕ್ರಮಕ್ಕೆ ಬ್ರೇಕ್ ಹಾಕಲು ಪಿಯು ಬೋರ್ಡ್ ಸಜ್ಜಾಗಿದೆ. ರಾಜ್ಯಾದ್ಯಂತ ಒಟ್ಟು 1,076 ಪರೀಕ್ಷಾ ಕೇಂದ್ರಗಳಿವೆ. ಅವುಗಳ ಸುತ್ತ 200 ಮೀಟರ್ ಸ್ಥಳವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳನ್ನು ಎಲ್ಲಾ ಜಿಲ್ಲಾ ಖಜಾನೆಗಳಲ್ಲಿ ಇರಿಸಲಾಗುತ್ತದೆ. ಖಜಾನೆಯ ಒಳಗೆ ಮತ್ತು ಹೊರಗೆ 24x7 ಸಿಸಿಟಿವಿ ಕಣ್ಗಾವಲು ಇರಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದಗಂತೆ ಕ್ರಮವಹಿಸಲಾಗಿದೆ.‌ ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ದಂಡದ ಜೊತೆಗೆ 1973ರ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.

ಪರೀಕ್ಷಾ ಕೇಂದ್ರದ ಸುತ್ತ ಸಂಪೂರ್ಣ ಪೊಲೀಸ್ ಬಂದೋಬಸ್ತ್ ಒದಗಿಸಲು ಪೊಲೀಸ್ ಇಲಾಖೆಗೆ ಪಿಯು ಬೋರ್ಡ್ ಮನವಿ ಮಾಡಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳು ಸಂಪೂರ್ಣವಾಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಮಾಡಲಾಗುತ್ತಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರೂ ಮಾತ್ರ ಕ್ಯಾಮೆರಾ ಇಲ್ಲದೇ ಇರುವ ಸಾಮಾನ್ಯ ಮೊಬೈಲ್ (Basic set) ಇರಿಸಿಕೊಳ್ಳಲು ಅನುಮತಿಸಲಾಗಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು, ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ

ಪರೀಕ್ಷೆಗಾಗಿ ವಿಶೇಷ ಜಾಗೃತ ದಳದ 2,152 ಸಿಬ್ಬಂದಿ ಹಾಗೂ ತಾಲೂಕು ಜಾಗೃತ ದಳದ 858, ಜಿಲ್ಲಾ ಜಾಗೃತ ದಳದ 64 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.‌ ಒಟ್ಟಾರೆ ಯಾವುದೇ ಅಕ್ರಮಗಳಿಗೆ ಅನುವು ಮಾಡಿಕೊಡದಂತೆ ಪರೀಕ್ಷೆಗೆ ಪಿಯು ಬೋರ್ಡ್ ತಯಾರಿ ನಡೆಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.