ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆಯ ದಿನಾಂಕವನ್ನು ಡಿಸೆಂಬರ್ 24ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಥಮ ಪಿಯುಸಿಗೆ ಡಿಸೆಂಬರ್ 12 ಮತ್ತು ದ್ವಿತೀಯ ಪಿಯುಸಿಗೆ ನವೆಂಬರ್ 27ರವರೆಗೆ ವಿಸ್ತರಿಸಲಾಗಿತ್ತು.
ಆದರೆ ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿಯ ಮೇರೆಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ದಾಖಲಾತಿ ಹಾಗೂ ಕಾಲೇಜು ಬದಲಾವಣೆಯನ್ನು ಡಿಸೆಂಬರ್ 24ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ : ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ
ಇನ್ನು ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ದಾಖಲಾತಿ ಹಾಗೂ ಕಾಲೇಜು ಬದಲಾವಣೆ ಪ್ರಕ್ರಿಯೆಯ ಅವಧಿಯನ್ನು ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಲಾಗುವುದಿಲ್ಲ. ಪೋಷಕರು ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಮುನ್ನ ಕಾಲೇಜು, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆಯಾ ಕೋರ್ಸಿಗೆ/ಸಂಯೋಜನೆಗೆ ಮಾನ್ಯತೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಂಡು ದಾಖಲಾತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.