ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ರಾಜ್ಯದಲ್ಲಿ ಯಶಸ್ವಿಯಾಗಿದೆ. ಇಂದು ಒಂದೇ ದಿನ 57,98,611 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ. 90ರಷ್ಟು ಪೂರ್ಣಗೊಳಿಸಲಾಗಿದೆ.
ರಾಜ್ಯ ಆರೋಗ್ಯ ಇಲಾಖೆ 0-5 ವರ್ಷದೊಳಗಿನ 64,07,692 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿತ್ತು. ಅದರಂತೆ ಇಂದು ಒಂದೇ ದಿನ 57,98,611 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವಲ್ಲಿ ಯಶಸ್ವಿಯಾಗಿದೆ.
ಓದಿ-ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡದ ನೆಲ: ಉದ್ಧವ್ಗೆ ಗೋವಿಂದ್ ಕಾರಜೋಳ ತಿರುಗೇಟು
ಇನ್ನು ಲಸಿಕಾ ಕಾರ್ಯ ಸಂಪೂರ್ಣ ಯಶಸ್ಸು ಸಾಧಿಸಲು ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮ ನಡೆಸಲಾಗಿದೆ. ಇನ್ನೂ ಮೂರು ದಿನಗಳ ಕಾಲ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಪೋಷಕರು ತಮ್ಮ ಮಕ್ಕಳಿಗೆ ಮರೆಯದೆ ಎರಡು ಹನಿ ಲಸಿಕೆ ಹಾಕಿಸಿ ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.