ETV Bharat / city

ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಸಂಸ್ಕಾರ, ಸಂಯಮದಿಂದ ವರ್ತಿಸುವಂತೆ ಅಭಿಮಾನಿಗಳಿಗೆ ಸಿಎಂ ಮನವಿ

ವರನಟ ಡಾ.ರಾಜಕುಮಾರ್ ಸುಪುತ್ರ, ಖ್ಯಾತ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. ಈ ದುಃಖಕರ ಸನ್ನಿವೇಶದಲ್ಲಿ, ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ, ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿಗಳು ಪುನೀತ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

puneeth-funeral-with-government-honors-cm-said
ಸಿಎಂ
author img

By

Published : Oct 29, 2021, 5:07 PM IST

ಬೆಂಗಳೂರು: ಇಂದು ನಿಧನ ಹೊಂದಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವರನಟ ಡಾ.ರಾಜಕುಮಾರ್ ಸುಪುತ್ರ, ಖ್ಯಾತ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ. ಕಿರಿಯ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಜನಪ್ರಿಯ ಮೇರು ನಟ, ಯುವಜನತೆಯ ಕಣ್ಮಣಿ, ಯೂಥ್ ಐಕಾನ್ ಆಗಿದ್ದ ಪುನೀತ್ ನಿಧನ ಹೊಂದಿರುವುದು ಕಲಾರಂಗಕ್ಕೆ ಬಹಳ ದೊಡ್ಡ ನಷ್ಟ. ವಿಧಿಯ ಕ್ರೂರ ಆಟ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಸಂಸ್ಕಾರ

ವೈಯಕ್ತಿಕವಾಗಿ ಅತ್ಯಂತ ಆತ್ಮೀಯ ಸಹೃದಯ ಬಂಧುವನ್ನು ಕಳೆದುಕೊಂಡಿದ್ದೇನೆ. ಅವರ ಉತ್ಸಾಹ, ಪ್ರತಿಭೆ, ಅವರ ಅನೇಕ ಅತ್ಯುತ್ತಮ ಚಲನಚಿತ್ರಗಳನ್ನು, ಕನ್ನಡದ ಸಾಂಸ್ಕೃತಿಕ ರಾಯಭಾರಿಯಂತೆ ನಾಡಿನ ಸಮಸ್ತ ಜನತೆಯ ಮನೆ, ಮನ ತಲುಪಿದ್ದ ಅವರ ವ್ಯಕ್ತಿತ್ವವನ್ನು ಮರೆಯುವುದು ಸಾಧ್ಯವೇ ಇಲ್ಲ.

ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಂಯಮದಿಂದ ವರ್ತಿಸಿ: ಅಭಿಮಾನಿಗಳಿಗೆ ಮನವಿ

ಈ ದುಃಖಕರ ಸನ್ನಿವೇಶದಲ್ಲಿ, ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ, ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿಗಳು ಪುನೀತ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.