ETV Bharat / city

ಕಂಠೀರವ ಸ್ಟುಡಿಯೋದ ಅಪ್ಪನ ಸಮಾಧಿಯ ಪಕ್ಕದಲ್ಲೇ ಅಪ್ಪು ಅಂತ್ಯಕ್ರಿಯೆ.. - ಸ್ಯಾಂಡಲ್​ವುಡ್​​

ಕನ್ನಡ ಚಿತ್ರರಂಗದ ನಾಯಕನಟ ಪುನೀತ್ ರಾಜ್‌ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ ಸರ್ಕಾರದ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ..

puneeth-rajkumar-funeral-near-rajkumar-grave
ಪುನೀತ್​ ರಾಜ್​ಕುಮಾರ್
author img

By

Published : Oct 29, 2021, 8:33 PM IST

ಬೆಂಗಳೂರು : ನಗರದ ಕಂಠೀರವ ಸ್ಟುಡಿಯೋದಲ್ಲಿ ತಂದೆ-ತಾಯಿಯ ಸಮಾಧಿ ಪಕ್ಕದಲ್ಲಿ ಪುನೀತ್​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಚಿತ್ರರಂಗದ ನಾಯಕನಟ ಪುನೀತ್ ರಾಜ್‌ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ ಸರ್ಕಾರದ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

puneeth-rajkumar-funeral-near-rajkumar-grave
ಆದೇಶ ಪ್ರತಿ

ಆದ ಕಾರಣ, ಡಾ. ರಾಜ್‌ಕುಮಾರ್ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಪುನೀತ್ ರಾಜ್‌ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲು ಅನುಕೂಲವಾಗುವಂತೆ ಅನುಮತಿ ನೀಡಿ ಸರ್ಕಾರಿ ಆದೇಶ ಹೊರಡಿಸಲು ಕೋರಿರುತ್ತಾರೆ.

ಇದಕ್ಕೆ ಅನುಕೂಲವಾಗುವಂತೆ ಅನುಮತಿ ನೀಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾ‌ನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.