ಬೆಂಗಳೂರು: ನಿನ್ನೆ ಹೃದಯಾಘಾತದಿಂದ ಪುನೀತ್ ರಾಜಕುಮಾರ್ ಇಹಲೋಕ ತ್ಯಜಿಸಿರುವ ಹಿನ್ನೆಲೆಯಲ್ಲಿ ಅವರ ಪುತ್ರಿ ಧೃತಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಧೃತಿ ಅವರು ನೇರವಾಗಿ ಸದಾಶಿವನಗರದ ತಮ್ಮ ನಿವಾಸಕ್ಕೆ ಆಗಮಿಸಿದ್ದು, ಕಂಠೀರವ ಕ್ರೀಡಾಂಗಣಕ್ಕೆ ಕರೆ ತರಲಾಗುತ್ತಿದೆ.
ವಿದ್ಯಾಭ್ಯಾಸಕ್ಕಾಗಿ ಪುನೀತ್ ಅವರ ಹಿರಿಯ ಪುತ್ರಿ ಧೃತಿ ಅಮೆರಿಕಕ್ಕೆ ತೆರಳಿದ್ದರು. ತಂದೆಯ ಸಾವಿನ ಸುದ್ದಿ ಬಳಿಕ ಅವರು ನಿನ್ನೆಯೇ ಅಮೆರಿಕದಿಂದ ಹೊರಟು ಇಂದು ಮಧ್ಯಾಹ್ನ ದೆಹಲಿಗೆ ಆಗಮಿಸಿ ಅಲ್ಲಿಂದ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ್ದಾರೆ.