ETV Bharat / city

ಪುಟ್ಟೇನಹಳ್ಳಿ ಪಕ್ಷಿಧಾಮ ಅರಣ್ಯ ಇಲಾಖೆ ವ್ಯಾಪ್ತಿಗೆ: ಹೈಕೋರ್ಟ್ ಆದೇಶ - Puttenahalli Bird Sanctuary to Forest Department

ಯಲಹಂಕ ಸಮೀಪದ ಪುಟ್ಟೇನಹಳ್ಳಿ ಕೆರೆಯ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಇನ್ನು ಮುಂದೆ ಅರಣ್ಯ ಇಲಾಖೆಯೇ ನೋಡಿಕೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

Puttenahalli Bird Sanctuary will be Managed by Forest Department
ಪುಟ್ಟೇನಹಳ್ಳಿ ಪಕ್ಷಿಧಾಮ ಅರಣ್ಯ ಇಲಾಖೆ ವ್ಯಾಪ್ತಿಗೆ
author img

By

Published : Dec 3, 2021, 5:41 PM IST

ಬೆಂಗಳೂರು: ನಗರದ ಯಲಹಂಕ ಸಮೀಪದ ಪುಟ್ಟೇನಹಳ್ಳಿ ಕೆರೆಯ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡಲು ಸರ್ಕಾರ 2019ರ ನ.19ರಂದು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಅಲ್ಲದೇ, ಇನ್ನು ಮುಂದೆ ಅರಣ್ಯ ಇಲಾಖೆಯೇ ಪಕ್ಷಿ ಸಂಕುಲದ ಪ್ರದೇಶವನ್ನು ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಯಲಹಂಕ - ಪುಟ್ಟೇನಹಳ್ಳಿ ಕೆರೆ ಹಿತರಕ್ಷಣಾ ಸಮಿತಿ ಮತ್ತು ಬರ್ಡ್ ಕನ್ಸರ್​ವೇಷನ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಆಲಿಸಿದ ಸಿಜೆ ರಿತುರಾಜ್ ಅವಸ್ಥಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪಕ್ಷಿ ಸಂಕುಲ ನಿಯಂತ್ರಣ ಮತ್ತು ನಿರ್ವಹಣೆ ಮಾಡುವ ಅಧಿಕಾರ ವನ್ಯಜೀವಿ ವಾರ್ಡನ್​​ಗೆ ಇದೆ. ಅದನ್ನು ಬಿಬಿಎಂಪಿಗೆ ಹಸ್ತಾಂತರ ಮಾಡುವುದು ನ್ಯಾಯೋಚಿತವಲ್ಲ. ಹಾಗಾಗಿ, ಅರಣ್ಯ ಇಲಾಖೆಯೇ ನಿರ್ವಹಣೆ ಮಾಡುವುದು ಸೂಕ್ತ ಎಂದು ಪೀಠ ಹೇಳಿದೆ.

ಅಲ್ಲದೇ, ಸರ್ಕಾರ ಈ ಮೊದಲೇ ಘೋಷಿಸಿದ್ದಂತೆ ಕೆರೆಯಲ್ಲಿ ಪಕ್ಷಿ ಸಂಕುಲವನ್ನು ಸಂರಕ್ಷಿಸಲು ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು 25 ಲಕ್ಷ ರೂ. ಬಿಡುಗಡೆ ಮಾಡಬೇಕು ಎಂದು ಪೀಠ ಆದೇಶ ನೀಡಿದೆ. ಕೆರೆಗೆ ಯಾವುದೇ ರೀತಿಯ ಕಲುಷಿತ ನೀರು ಹರಿಯುವುದನ್ನು ತಡೆಗಟ್ಟಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೀಠ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಲಸಿಕೆ ಪಡೆದರೂ ಹೆಮ್ಮಾರಿ Omicron ಅಟ್ಯಾಕ್: ಹೊಸ ತಳಿ ಎಷ್ಟು ಡೇಂಜರಸ್ ಗೊತ್ತಾ..?

ಅರ್ಜಿದಾರರು, 2015ರ ಏಪ್ರಿಲ್​ನಲ್ಲಿ ಪುಟ್ಟೇನಹಳ್ಳಿ ಕೆರೆಯನ್ನು ಮೀಸಲು ಪಕ್ಷಿಧಾಮ ಎಂದು ಘೋಷಿಸಲಾಗಿದೆ. ಆದರೆ, ಅದನ್ನು ಕಾನೂನಿಗೆ ವಿರುದ್ಧವಾಗಿ ಬಿಬಿಎಂಪಿಗೆ ಹಸ್ತಾಂತರ ಮಾಡುತ್ತಿರುವುದು ಸರಿಯಲ್ಲ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.