ಬೆಂಗಳೂರು: ನಾನು ಡಿಸಿಎಂ ಆಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಆರ್.ಅಶೋಕ್ ತಿಳಿಸಿದರು. ಕೆ.ಕೆ.ಗೆಸ್ಟ್ ಹೌಸ್ನಲ್ಲಿ ಮಾತನಾಡಿದ ಅವರು, ನನಗೆ ಡಿಸಿಎಂ ಸ್ಥಾನ ನೀಡುವ ಕುರಿತು ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ ಎಂದು ತಿಳಿಸಿದರು.
ಸಚಿವ ಸಂಪುಟ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ ರಚನೆಯಾಗಲಿದೆ. ಬಹುಶಃ ಒಂದು ವಾರದಲ್ಲೇ ಈ ಎಲ್ಲ ಬೆಳವಣಿಗೆಗಳು ಆಗಬಹುದು ಎಂದು ತಿಳಿಸಿದರು.
ಇನ್ನು ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಈ ರೀತಿಯ ಯಾವುದೇ ನಿಯಮಗಳಿಲ್ಲ. ಹಿರಿತನವನ್ನು ನೋಡಿ ಸಚಿವ ಸ್ಥಾನ ನೀಡಲಿದ್ದಾರೆ ಎಂದರು.