ಹೊಸಕೋಟೆ: ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಬೈಲನರಸಾಪುರಕ್ಕೆ ಭೇಟಿ ನೀಡಿ, ಕೊರೊನಾ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಲಾಗಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದಲ್ಲಿ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಕಂದಾಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಇಂದು ಭೇಟಿ ನೀಡಿ, ಸೋಂಕು ತಡೆಯಲು ಗ್ರಾಮದಲ್ಲಿ ಕೈಗೊಳ್ಳಲಾಗಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರು ಗ್ರಾಮಸ್ಥರಿಗೆ ಕರೆ ಮಾಡಿ ಗ್ರಾಮದಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕುರಿತು ವಿಚಾರಣೆ ನಡೆಸಿದರು. ಈ ವೇಳೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಆರ್.ಪ್ರಶಾಂತ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಮಂಜುನಾಥ್, ಹೊಸಕೋಟೆ ತಾಲೂಕು ತಹಶೀಲ್ದಾರ್ ಗೀತಾ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.