ETV Bharat / city

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ.. ರಾಜ್ಯದಲ್ಲಿ ಮೂರು ದಿನ ಮಳೆ ಮುಂದುವರಿಕೆ - ಕರ್ನಾಟಕದಲ್ಲಿ ಮಳೆ ಮುಂದುವರಿಕೆ

ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮೂರು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

rain in state
ರಾಜ್ಯದಲ್ಲಿ ಮಳೆ
author img

By

Published : Mar 22, 2022, 9:13 AM IST

ಬೆಂಗಳೂರು: ಬಂಗಾಳಕೊಲ್ಲಿಯ ಅಸನಿ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸೋಮವಾರ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಮಾರ್ಚ್ 22ರಿಂದ 24ರ ವರೆಗೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹೇಳಿದೆ.

ಇದನ್ನೂ ಓದಿ: ವಿಜಯನಗರ ಠಾಣಾ ಪೊಲೀಸ್​​ ಇನ್ಸ್​​ಪೆಕ್ಟರ್ ಬಾಲಕೃಷ್ಣ ಅಮಾನತು

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಹಾಗೂ ಮೈಸೂರು, ಮಂಡ್ಯ ಮತ್ತು ರಾಮನಗರದಲ್ಲಿ ಮಾರ್ಚ್ 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.