ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ(rain) ಮುಂದಿನ 48 ಗಂಟೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ (Meteorology department) ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಇಂದು ಭಾರಿ (heavy rain) ಮಳೆಯಾಗಲಿದೆ. ಈ ಹಿನ್ನೆಲೆ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಸ್ವಾತಂತ್ರ್ಯ ಅಮೃತ ಮಹೋತ್ಸವ: ರಾಜ್ಯ ತಲುಪಿದ ಕಾಶ್ಮೀರ ಟು ಕನ್ಯಾಕುಮಾರಿ ಸೈಕಲ್ ಯಾತ್ರೆ ಕೈಗೊಂಡ ಅಧಿಕಾರಿ
ಮಲೆನಾಡು ಜಿಲ್ಲೆಗಳಲ್ಲಿ (malnad district) ಮುಂದಿನ 48 ಗಂಟೆ ಹಾಗೂ ಮೈಸೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ (yellow alert) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರದಲ್ಲಿ ಸಾಮಾನ್ಯ ಮಳೆ:
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ (rain) ಎಂದು ಇಲಾಖೆ ತಿಳಿಸಿದೆ.