ಬೆಂಗಳೂರು : ರಾಜ್ಯದ ಕರಾವಳಿಯಲ್ಲಿ ಮೇ 24 ರಿಂದ ಮೇ 26ರವರೆಗೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ 24 ರಿಂದ 26ರವರೆಗೆ ಉತ್ತರ ಒಳನಾಡಿನಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಮೇ 27 ಹಾಗೂ 28ರಂದು ರಾಜ್ಯದಲ್ಲಿ ತಾತ್ಕಾಲಿಕವಾಗಿ ಮಳೆಯ ಪ್ರಮಾಣ ಕಡಿಮೆ ಆಗಲಿದೆ.
ಯಾಸ್ ಚಂಡಮಾರುತವು ಬಂಗಾಳ ಉಪಸಾಗರದಲ್ಲಿದ್ದು, ಮೇ 26 ರಂದು, ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ತಲುಪುವ ಸಾಧ್ಯತೆ ಇದೆ.
ಈ ಚಂಡಮಾರುತದಿಂದ ಕರ್ನಾಟಕ ರಾಜ್ಯಕ್ಕೆ ಪರಿಣಾಮವಿರುವುದಿಲ್ಲ, ಭಾರೀ ಮಳೆಯನ್ನು ನಿರೀಕ್ಷಿಸುವಂತಿಲ್ಲ ಎಂದರು.
ಇಂದು ಉತ್ತರ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ.
ಗದಗಿನಲ್ಲಿ 9 ಸೆಂ.ಮೀ, ಶಿರಹಟ್ಟಿಯಲ್ಲಿ 5, ಬೆಳಗಾವಿ 6, ಬೈಲಹೊಂಗಲ 3, ಯಾದಗಿರಿ ಜಿಲ್ಲೆಯ ಕೆಂಬಾವಿಯಲ್ಲಿ 3 ಸೆಂ.ಮೀ ಮಳೆಯಾಗಿದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದರು.