ETV Bharat / city

ಬೆಂಗಳೂರಿನಲ್ಲಿ ಸತತ 3ನೇ ದಿನವೂ ಮಳೆಯಬ್ಬರ: ಜಲಾವೃತ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ - ಈಟಿವಿ ಭಾರತ ಕನ್ನಡ

ಸಿಲಿಕಾನ್ ಸಿಟಿಯಲ್ಲಿ ಸತತ 3ನೇ ದಿನವೂ ಮಳೆಯ ಅಬ್ಬರ ಮುಂದುವರೆದಿದೆ. ಜಲಾವೃತ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

Rain Related incidents in Bengaluru
ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ
author img

By

Published : Aug 2, 2022, 7:16 AM IST

ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಶನಿವಾರ, ಭಾನುವಾರ ರಾತ್ರಿ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿದಿದೆ. ಸೋಮವಾರ ರಾತ್ರಿ ಕೂಡ ಮಳೆ ಮುಂದುವರೆದಿದ್ದು, ವಾಹನ ಸವಾರರು ಪರದಾಡುವಂತಾಯಿತು. ನಗರದ ಎಂ.ಎಸ್ ಪಾಳ್ಯದ ಬಳಿ ಬೈಕ್ ಸವಾರನೊಬ್ಬ ಕಾಮಗಾರಿ ನಡೆಯುತ್ತಿದ್ದ ಜಲಾವೃತ ರಸ್ತೆ ಗುಂಡಿಗೆ ಬಿದ್ದು ತಲೆಗೆ ಗಂಭೀರವಾದ ಗಾಯವಾಗಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನಲ್ಲಿ ಮುಂದುವರೆದ ಮಳೆಯಬ್ಬರ

ರಾತ್ರಿ 8 ರಿಂದ ಪ್ರಾರಂಭವಾದ ಮಳೆ ಕೊಂಚ ಬಿಡುವು ನೀಡಿ ಮತ್ತೆ ತಡ ರಾತ್ರಿಯವರೆಗೂ ಸುರಿದಿದೆ. ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಫ್ರೆಜರ್ ಟೌನ್, ಆರ್​ಆರ್ ​ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೇಸ್​ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಇನ್ನು ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥ ನಾಗೇನಹಳ್ಳಿ, ರಾಮಮೂರ್ತಿನಗರ ಹಾಗೂ ಕಾಡುಗೋಡಿ ಸೇರಿ ಬಹುತೇಕ ಕಡೆ ಸಾಧಾರಣ ಮಳೆಯಾಗಿದೆ.

ಪ್ರಮುಖ ರಸ್ತೆಗಳು ಜಲಾವೃತ: ಮಲ್ಲೇಶ್ವರ, ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳು, ರಾಜಭವನ ರಸ್ತೆ, ಶಿವಾಜಿ ನಗರ, ರಾಜಾಜಿ ನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ ಹಾಗೂ ಕೆಆರ್​​ಪುರ ಸೇರಿ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ.

ಅಭಿವೃದ್ದಿ ಕಾಮಗಾರಿ ಸ್ಥಳಗಳಲ್ಲಿ ನೀರು: ಸ್ಮಾರ್ಟ್ ಸಿಟಿ ಯೋಜನೆ ಮತ್ತು ವಿವಿಧ ಅಭಿವೃದ್ದಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದ ದೃಶ್ಯಗಳು ಕಂಡು ಬಂದಿದೆ. ನಗರದಲ್ಲಿ ಮುಂದಿನ 4 ದಿನ ಮಳೆ ಮುಂದುವರೆಯಲಿದೆ. ಆ.3 ರವರೆಗೆ ಸಾಧಾರಣಕ್ಕಿಂತ ಹೆಚ್ಚು ಮಳೆಯಾದರೆ, ಆ.4 ರಂದು ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.