ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ,ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ನಗರದಲ್ಲಿ ಮುಂದಿನ 48 ಗಂಟೆ ಮಳೆ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಗರದಲ್ಲಿ ಸುರಿಯುತ್ತಿರುವ ಮಳೆ ಮುಂದಿನ 48 ಗಂಟೆಗಳ ಕಾಲ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ.
ಯೆಲ್ಲೋ ಅಲರ್ಟ್: ಇಂದು ಮತ್ತು ನಾಳೆ ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆಯಾಗುವ ಮೂನ್ಸೂಚನೆ ಹಿನ್ನೆಲೆಯಲ್ಲಿ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೆಲವು ಬಡಾವಣೆಗಳು ಜಲಾವೃತ: ಮಂಗಳವಾರ ರಾತ್ರಿ ಸುರಿದ ಮಳೆಯಿಂದ ರಾಜಧಾನಿಯ ಜನತೆ ಕಂಗಾಲಾಗಿದ್ದಾರೆ. ಹೊರಮಾವು ಸೇರಿದಂತೆ ಕೆಲವು ಬಡಾವಣೆಗಳು ಇನ್ನೂ ಜಲಾವೃತವಾಗಿವೆ. ಸಾವಿರಾರು ಮನೆಗಳಿಗೆ ನುಗ್ಗಿರುವ ನೀರು ಹೊರಹಾಕಲು ನಿವಾಸಿಗಳು ಪರದಾಡುತ್ತಿದ್ದಾರೆ. ಸಂಕಷ್ಟದಲ್ಲಿರುವ ಜನತೆಗೆ ಆಹಾರ, ಕುಡಿಯುವ ನೀರನ್ನ ಸ್ವಯಂ ಸೇವಕರು ಪೂರೈಸುತ್ತಿದ್ದಾರೆ.
ರಸ್ತೆಗಳಲ್ಲಿ ತುಂಬಿರುವ ನೀರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಹೊರಮಾವು ವಾರ್ಡ್‌ನ ವಡ್ಡರಪಾಳ್ಯದ ಸಾಯಿ ಬಡಾವಣೆ, ಲಿಂಗರಾಜಪುರದ ಕೆಎಸ್‌ಎಫ್‌ಸಿ ಬಡಾವಣೆ, ಬಸವೇಶ್ವರ ನಗರದ ಅಭಿಮಾನಿ ಕನ್ವೆನ್‌ಷನ್ ಹಾಲ್, ರಾಜರಾಜೇಶ್ವರಿ ನಗರ ಕ್ಷೇತ್ರದ ಐಡಿಯಲ್ ಹೋಮ್ಸ್ ಹಾಗೂ ಎಚ್‌ಎಸ್‌ಆರ್ ಲೇಔಟ್‌ನ 6 ನೇ ಸೆಕ್ಟರ್ ಸೇರಿ ಹಾನಿಗೊಳಗಾದ ನಗರದ ವಿವಿಧ ಬಡಾವಣೆಗಳ ರಸ್ತೆಗಳಲ್ಲಿ ನಿಂತಿರುವ ನೀರು ಇನ್ನೂ ಇಳಿದಿಲ್ಲ.
ಇದನ್ನೂ ಓದಿ: ಬೆಳಗಾವಿಯಲ್ಲಿ ನಿರಂತರ ಮಳೆ: ಕ್ಷೇತ್ರ ಪ್ರದಕ್ಷಿಣೆ ಹಾಕಿದ ಶಾಸಕ ಅಭಯ್ ಪಾಟೀಲ್