ಬೆಂಗಳೂರು : ಮೇ 19 ರಿಂದ 23ರವರೆಗೆ ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಕೆಲವೆಡೆ ಸಾಧಾರಣಾ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಲೆನಾಡಿನ ಜಿಲ್ಲೆಯಾದ ಕೊಡಗು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಸಿ.ಎಸ್ ಪಾಟೀಲ್ ತಿಳಿಸಿದರು.
ಕಲಬುರಗಿಯಲ್ಲಿ ಗರಿಷ್ಟ ಉಷ್ಣಾಂಶ 37, ರಾಯಚೂರು 37.5, ಬೀದರ್ 35, ಬಿಜಾಪುರ 35, ಬೆಂಗಳೂರಿನಲ್ಲಿ 33.1 ಡಿಗ್ರಿ ಸೆಂಟಿಗ್ರೇಡ್ ದಾಖಲಾಗಿದೆ.