ಬೆಂಗಳೂರು: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಅಶೋಕ್ ಗಸ್ತಿ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಇವರ ಅಗಲಿಕೆಗೆ ಆಘಾತ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು, ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಇತ್ತೀಚೆಗೆ ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ನಿಧನರಾಗಿದ್ದಾರೆ ಎಂಬ ಸುದ್ದಿ ಆಘಾತ ತಂದಿದೆ. ಕುಟುಂಬಕ್ಕೆ ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
-
Deeply saddened to hear the news of the passing way of Rajya Sabha MP from Karnataka Shri. Ashok Gasti
— DK Shivakumar (@DKShivakumar) September 17, 2020 " class="align-text-top noRightClick twitterSection" data="
My condolences to his family and friends. pic.twitter.com/EPrxwdRcRm
">Deeply saddened to hear the news of the passing way of Rajya Sabha MP from Karnataka Shri. Ashok Gasti
— DK Shivakumar (@DKShivakumar) September 17, 2020
My condolences to his family and friends. pic.twitter.com/EPrxwdRcRmDeeply saddened to hear the news of the passing way of Rajya Sabha MP from Karnataka Shri. Ashok Gasti
— DK Shivakumar (@DKShivakumar) September 17, 2020
My condolences to his family and friends. pic.twitter.com/EPrxwdRcRm
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದು, ರಾಜ್ಯಸಭಾ ಸದಸ್ಯರಾದ ಅಶೋಕ್ ಗಸ್ತಿ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಸ್ಥರು ಹಾಗೂ ಪ್ರೀತಿಪಾತ್ರರಿಗೆ ನೋವನ್ನ ಭರಿಸುವ ಶಕ್ತಿ ನೀಡಲಿ ಎಂದು ಆಶಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಡಿಸಿಎಂ ಜಿ ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಅಶೋಕ್ ಗಸ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.