ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಸಭೆ ಆರಂಭಗೊಂಡಿದೆ.
ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ 4 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಯು ಅರ್ಜಿಗಳ ಪರಿಶೀಲನೆ ನಡೆಸಿ 120ಕ್ಕೆ ಪರಿಷ್ಕರಣೆ ಮಾಡಿದ್ದು, ಅಂತಿಮ ಆಯ್ಕೆ ಕಸರತ್ತು ನಡೆಸಲಾಗುತ್ತಿದೆ. ಇದು 66ನೇ ಕನ್ನಡ ರಾಜ್ಯೋತ್ಸವ ಆಗಿದ್ದು, 66 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. ಇಂದಿನ ಸಭೆಯಲ್ಲಿ 66 ಗಣ್ಯರ ಹೆಸರು ಅಂತಿಮಗೊಳ್ಳಲಿದೆ.
ಇದನ್ನೂ ಓದಿ: 'ಬಿಟ್ ಕಾಯಿನ್, ಡ್ರಗ್ ಕೇಸ್ನಲ್ಲಿ ನೋ ಕಾಂಪ್ರಮೈಸ್, ಎಷ್ಟೇ ಪ್ರಭಾವಿಯಾಗಿದ್ರೂ ಕ್ರಮ'
ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರೆ ಹಿರಿಯ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಭಾಗವಹಿಸಿದ್ದಾರೆ.