ಬೆಂಗಳೂರು: ಸಿಡಿ ವಿಡಿಯೋ ಬಿಡುಗಡೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ( ಎಸ್ಐಟಿ)ದ ಅಧಿಕಾರಿಗಳು ನೀಡಿದ್ದ ನೋಟಿಸ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಜರಾಗುತ್ತಾರೆಯೇ? ಎಂಬ ಪ್ರಶ್ನೆ ಮೂಡಿದೆ.
ಅನಾರೋಗ್ಯ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಅಧಿಕಾರಿಗಳು, ಇಂದು ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ಸಿಡಿಯಲ್ಲಿರುವ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ ಸ್ವಯಂಪ್ರೇರಿತ ಹೇಳಿಕೆ ದಾಖಲಿಸಿದ ಬಳಿಕ ಎಸ್‌ಐಟಿ ಅಧಿಕಾರಿಗಳು ಸತತ 5 ದಿನಗಳ ಕಾಲ ಆಕೆಯನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸಿಡಿ ಹಿಂದಿನ ಕೆಲ ರಹಸ್ಯಗಳನ್ನು ತಿಳಿಸಿದ್ದಾರೆ ಎನ್ನಲಾಗಿದೆ.
2020 ರಲ್ಲಿ ಲಾಕ್‌ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಯುವತಿ ಹಲವು ಬಾರಿ ಭೇಟಿಯಾಗಿದ್ದರು. ಆ ಸಂದರ್ಭದಲ್ಲೇ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎನ್ನಲಾಗಿದೆ.
ರಮೇಶ್ ಜಾರಕಿಹೊಳಿ ಉಡುಗೊರೆ ರೂಪದಲ್ಲಿ ನೀಡಿದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಮೊಬೈಲ್ ಬಿಲ್‌ಗಳನ್ನು ಯುವತಿ ತನಿಖಾಧಿಕಾರಿಗಳಿಗೆ ಕೊಟ್ಟಿದ್ದಾರೆ. 2 ಬ್ಯಾಗ್ ಹಾಗೂ ಬಟ್ಟೆಗಳನ್ನೂ ಶಾಪಿಂಗ್ ಮಾಡಿಸಿದ್ದಾರೆ. ಇದನ್ನು ಖರೀದಿಸಿದ ಅಂಗಡಿಗಳ ಮಾಹಿತಿಯನ್ನೂ ನೀಡಿದ್ದಾಳೆ ಎನ್ನಲಾಗಿದೆ.