ETV Bharat / city

ಮೇಕೆದಾಟು ಯೋಜನೆ: ಕೇಂದ್ರ ಸಚಿವರ ಭೇಟಿ ಮಾಡಲಿರುವ ರಮೇಶ್ ಜಾರಕಿಹೊಳಿ

ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Ramesh Zarakiholi will be meet the Union Ministers soon
ಮೇಕೆದಾಟು ಯೋಜನೆ ಅನುಷ್ಠಾನ: ಶೀಘ್ರದಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ರಮೇಶ್ ಜಾರಕಿಹೊಳಿ
author img

By

Published : Oct 13, 2020, 4:47 PM IST

ಬೆಂಗಳೂರು: ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ‌ ಮತ್ತು ಅರಣ್ಯ ‌ಇಲಾಖೆಯ ಅನುಮತಿ ಪಡೆಯಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಸದ್ಯದಲ್ಲೇ ದೆಹಲಿಗೆ ತೆರಳಲಿದ್ದಾರೆ.

Ramesh Zarakiholi will be meet the Union Ministers soon
ಮೇಕೆದಾಟು ಯೋಜನೆ ಅನುಷ್ಠಾನ: ಶೀಘ್ರದಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ರಮೇಶ್ ಜಾರಕಿಹೊಳಿ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಜಲಸಂಪನ್ಮೂಲ ಇಲಾಖೆಯ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮಾತನಾಡಿದ ಅವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು.

ಇನ್ನು, ಜಲಸಂಪನ್ಮೂಲ ಇಲಾಖೆಯಡಿಯಲ್ಲಿ‌ ಕಾರ್ಯ ನಿರ್ವಹಿಸುತ್ತಿರುವ ಕಾಡಾ ಹಾಗೂ ವಾಲ್ಮಿ ಸಂಸ್ಥೆಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಆಧುನಿಕ ಮತ್ತು ಸಾವಯವ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು‌ ಅಧಿಕಾರಿಗಳಿಗೆ ಜಾರಕಿಹೊಳಿ‌ ಸೂಚಿಸಿದ್ದಾರೆ.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.