ETV Bharat / city

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಜನಪ್ರತಿನಿಧಿಗಳ ಪೀಠಕ್ಕೆ ವರ್ಗಾವಣೆ! - ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆ

ರಮೇಶ್ ಜಾರಕಿಹೊಳಿ ಸಿಡಿ ಕೇಸ್​​​​​​ಗೆ ಸಂಬಂಧಿಸಿದಂತೆ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್‌ನಲ್ಲಿನ ಪ್ರತಿನಿಧಿಗಳ ಪೀಠಕ್ಕೆ ವರ್ಗಾಯಿಸಲು ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಮುಖ್ಯ ನ್ಯಾಯಮೂರ್ತಿಗಳಿಗೆ ಕೋರಿದೆ.

Ramesh Jarkiholi CD case
ರಮೇಶ್ ಜಾರಕಿಹೊಳಿ ಸಿಡಿ ಕೇಸ್
author img

By

Published : Mar 30, 2022, 6:33 AM IST

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್‌ನಲ್ಲಿ ಜನ ಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಸ್ಥಾಪನೆಯಾಗಿರುವ ವಿಶೇಷ ಪೀಠಕ್ಕೆ ವರ್ಗಾಯಿಸಲು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಮುಖ್ಯ ನ್ಯಾಯಮೂರ್ತಿಗಳಿಗೆ ಕೋರಿದೆ.

ಸಿಡಿ ಕೇಸ್ ತನಿಖೆಗೆ ಎಸ್‌ಐಟಿ ರಚಿಸಿದ ನಗರ ಪೊಲೀಸ್ ಆಯುಕ್ತರ ಆದೇಶ ಪ್ರಶ್ನಿಸಿ ಹಾಗೂ ಆರೋಪಿ ರಮೇಶ್ ಜಾರಕಿಹೊಳಿ ದೂರು ಆಧರಿಸಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಸಂತ್ರಸ್ತೆ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಮಂಗಳವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಪ್ರಕರಣದ ಆರೋಪಿ ಹಾಲಿ ಶಾಸಕ ಆಗಿರುವುದರಿಂದ ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಲು ಇರುವ ವಿಶೇಷ ಪೀಠದ ಮುಂದೆ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸಿ ಆದೇಶಿಸಲು ಕಡತವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಮಂಡಿಸಿ ಒಪ್ಪಿಗೆ ಪಡೆಯುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದರು. ಇದಕ್ಕೂ ಮುನ್ನ ಸಂತ್ರಸ್ತೆ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ಎಸ್‌ಐಟಿ ರಚನೆ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಯಲ್ಲಿ ಪ್ರಮುಖ ಕೋರಿಕೆಗಳಿವೆ. ಆ ಕುರಿತು ನಿಮ್ಮ ಪೀಠವೇ ವಾದ ಆಲಿಸಬೇಕು ಎಂದು ಕೋರಿದರು.

ಇದನ್ನೂ ಓದಿ: ಬಿಜೆಪಿ ಸೇರ್ಪಡೆ ವದಂತಿ: ಹೊರಟ್ಟಿ ಜೊತೆ ಮಹತ್ವದ ಮಾತುಕತೆ ನಡೆಸಿದ ಹೆಚ್‌ಡಿಕೆ

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣ ಆಲಿಸಲು ವಿಶೇಷ ಪೀಠ ರಚಿಸಿ ಈ ಹಿಂದೆಯೇ ಮುಖ್ಯ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ. ಹೀಗಾಗಿ, ನಾವು ಆ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಾಗದು ಎಂದಿತು. ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮಾಹಿತಿ ನೀಡಿ, ಸದ್ಯ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಪೀಠ ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆ ನಡೆಸಲಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.