ಬೆಂಗಳೂರು: ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ದೀರ್ಘಾವಧಿ ಸೇವೆ ಸಲ್ಲಿಸಿದ್ದ ಹಿರಿಯ ನಿವೃತ್ತ ಐಪಿಎಸ್ ಅಧಿಕಾರಿ ಪಿ.ಜಿ. ಹರ್ಲಂಕರ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ವಚ್ಛ ಮತ್ತು ಶುಭ್ರ ಆಡಳಿತಕ್ಕೆ ಹೆಸರಾಗಿದ್ದ ಹರ್ಲಂಕರ್ ಅವರು ಪೊಲೀಸ್ ಸಮವಸ್ತ್ರವನ್ನು ತಮ್ಮ ಧರ್ಮವನ್ನಾಗಿ ಸ್ವೀಕರಿಸಿ ಕೆಲಸ ಮಾಡಿದ್ದರು. ಅವರು ತಮ್ಮ ದೇಹವನ್ನು ಚಿಕಿತ್ಸಾ ಉದ್ದೇಶಗಳಿಗಾಗಿ ಆಸ್ಪತ್ರೆಗೆ ದಾನ ಮಾಡಿ ಮಾದರಿಯಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪಿ.ಜಿ. ಹರ್ಲಂಕರ್ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಪ್ರಾರ್ಥಿಸಿದ್ದಾರೆ.