ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಒಂದೇ ಒಂದು ರೂಪಾಯಿ ಕೂಡ ಅವ್ಯವಹಾರ ನಡೆದಿಲ್ಲವೆಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಆರೋಗ್ಯ ಇಲಾಖೆ ಮೇಲೆ ಆರೋಪ ಮಾಡಿದ್ರು. ಅದಕ್ಕೆ ನಾನು ಉತ್ತರ ಕೊಡುವ ಕೆಲಸ ಮಾಡಿದ್ದೇನೆ. ಈಗ ಆರೋಗ್ಯ ಇಲಾಖೆ 750 ಕೋಟಿ ರೂ. ಖರ್ಚು ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ ನಾವು ಬರೀ 290 ಕೋಟಿ ರೂ. ಮಾತ್ರ ಖರ್ಚು ಮಾಡಿದ್ದೇವೆ ಎಂದರು.
ಕೆಲವು ಬಾರಿ ಡಿಮ್ಯಾಂಡ್ ಇದ್ದಂತ ವೇಳೆ ಪೂರೈಕೆ ಇಲ್ಲದೇ ಬೆಲೆ ಏರುಪೇರು ಆಗಿರಬಹುದು. ಆದರೆ ತಮ್ಮ ಇಲಾಖೆಯಲ್ಲಿ ಅವ್ಯವಹಾರ ಆಗಿಲ್ಲವೆಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.