ಬೆಂಗಳೂರು: ಒಂಟಿ ಮಹಿಳೆ ಮೇಲೆ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬಾಗಲೂರು ಬಳಿ ಇರುವ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಪತಿಯಿಂದ ವಿಚ್ಚೇದನ ಪಡೆದ ಮಹಿಳೆ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸವಿದ್ದರು. ಇದೇ ಅಪಾರ್ಟ್ಮೆಂಟ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ 21 ವರ್ಷದ ಸುಮನ್ ದೇವ್ ಕೃತ್ಯವೆಸಗಿದ ವ್ಯಕ್ತಿ. ಈತ ತಡರಾತ್ರಿ ಮಂಕಿಕ್ಯಾಪ್ ಧರಿಸಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕೊಠಡಿಯಿಂದ ಹೊರಬಂದು ರಕ್ಷಣೆಗಾಗಿ ಕೂಗಾಡಿದ್ದಾರೆ. ಆಗ ಆರೋಪಿ ಕಿಟಕಿಯಿಂದ ಹಾರಿ ಪರಾರಿಯಾಗಿದ್ದಾನೆ.
ಈ ಸಂಬಂಧ ಬಾಗಲೂರ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇರೆಗೆ ಪೊಲೀಸರು ಸಿಸಿಟಿವಿ ದೃಶ್ಯ ಆಧಾರಿಸಿ ಸೆಕ್ಯುರಿಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪತಿ, ಸಂಬಂಧಿಕರಿಂದ ದೂರವಾದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕೃತ್ಯ ನಡೆಸುತ್ತಿದುದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.