ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ ಚನ್ನಣ್ಣನವರ್ ನೇತೃತ್ವದ ತಂಡವು ಮಾರ್ಕೆಟ್ ವೇಡಿ, ಜಾನ್ಸನ್, ಬಾಬಿರವ ಸೇರಿದಂತೆ 10ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ದಾಳಿ ಮಾಡಿ ಖಡಕ್ ವಾರ್ನ್ ಮಾಡಿದ್ದಾರೆ.
ಬೆಂಗಳೂರು: ಕಾಟನ್ ಪೇಟೆ, ಕಲಾಸಿಪಾಳ್ಯ ಹಾಗೂ ಮೆಜೆಸ್ಟಿಕ್ ಸುತ್ತಮುತ್ತ ಪ್ರದೇಶಗಳಲ್ಲಿರುವ ರೌಡಿಶೀಟರ್ಗಳಿಗೆ ತಡರಾತ್ರಿ ನಗರ ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ್ ಬಿಸಿ ಮುಟ್ಟಿಸಿದ್ದಾರೆ.
ರವಿ ಚನ್ನಣ್ಣನವರ್ ನೇತೃತ್ವದಲ್ಲಿ ತಂಡವು ಮಾರ್ಕೆಟ್ ವೇಡಿ, ಜಾನ್ಸನ್, ಬಾಬಿರವ ಸೇರಿದಂತೆ 10ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ದಾಳಿ ಮಾಡಿ ಖಡಕ್ ವಾರ್ನ್ ಮಾಡಿದ್ದಾರೆ.
![undefined](https://s3.amazonaws.com/saranyu-test/etv-bharath-assests/images/ad.png)
ಈ ವೇಳೆ ರೌಡಿಗಳ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಪೊಲೀಸರು ಇವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಲಾಸಿಪಾಳ್ಯ, ಮಾರ್ಕೆಟ್ ಹಾಗೂ ಕಾಟನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಅಕ್ರಮ ಚಟುವಟಿಕೆ ನಡೆಸುವವರ ಮೇಲೆ ಎಚ್ಚರಿಕೆ ನೀಡಿದ್ದಾರೆ.