ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳನ್ನ ಅತ್ಯಗತ್ಯ ಸೇವೆ ಒದಗಿಸುತ್ತಿರುವ ಇಲಾಖೆಗಳೆಂದು ಪರಿಗಣಿಸಿ ಈ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ನಿರ್ದೇಶನ ನೀಡಿದ್ದಾರೆ.

ನಿನ್ನೆಯಷ್ಟೆ ಹದಿನಾಲ್ಕು ಇಲಾಖೆಗಳ ಎಲ್ಲ ವೃಂದದ ಅಧಿಕಾರಿ, ಸಿಬ್ಬಂದಿ ಕೆಲಸಕ್ಕೆ ಇಂದು ಹಾಜರಬೇಕೆಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದರು.
ಸಚಿವಾಲಯ ಸೇರಿದಂತೆ ರಾಜ್ಯಮಟ್ಟದ ಕಚೇರಿಗಳಲ್ಲಿ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ಎಲ್ಲಾ ವರ್ಗದ ಅಧಿಕಾರಿ/ಸಿಬ್ಬಂದಿ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ.