ಬೆಂಗಳೂರು: ಬಸವಕಲ್ಯಾಣ ಉಪಸಮರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿರುವ ಮಲ್ಲಿಖಾರ್ಜುನ ಖೂಬಾ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಿದೆ. ಮತದಾನ ಹಂತದಲ್ಲೇ ಬಿಜೆಪಿ ಖೂಬಾರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಆದೇಶ ಹೊರಡಿಸಿದೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೀವು ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಶರಣು ಸಲಗಾರ ಇವರ ವಿರುದ್ಧ ಬಂಡುಕೋರ ಅಭ್ಯರ್ಥಿಯಾಗಿ ನಿಂತು ನಮ್ಮ ಪಕ್ಷದ ಶಿಸ್ತು ಉಲ್ಲಂಘಿಸಿದ್ದೀರಿ.
ಪಕ್ಷದಿಂದ ಎಲ್ಲ ರೀತಿಯ ಕೊನೆಯ ಗಳಿಗೆಯ ಪ್ರಯತ್ನಗಳು ನಡೆದಾಗಲೂ ಕೂಡ ನೀವು ಚುನಾವಣಾ ಕಣದಿಂದ ಹಿಂದೆ ಸರಿಯಲಿಲ್ಲ. ಈ ಹಿನ್ನೆಲೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಪ್ರಮುಖ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ ಕಣ್ಣಕ್ಕೆ ಇಳಿಯುವ ಮೂಲಕ ಶಕ್ತಿ ಪ್ರದರ್ಶನಕ್ಕೆ ನಿಂತಿದ್ದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಬಂದು ಬಿಜೆಪಿ ಟಿಕೆಟ್ ಪ್ರಮುಖ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಸ್ವಾಭಿಮಾನಿ ಬಳಗದ ಅಪಾರ ಬೆಂಬಲಿಗರೊಂದಿಗೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.