ಬೆಂಗಳೂರು: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸಂಸ್ಥೆ 5 ಲಕ್ಷ ರೂ. ಹಾಗೂ ರಿಲಯನ್ಸ್ ಕಂಪನಿ 5 ಕೋಟಿ ರೂ. ಗಳ ದೇಣಿಗೆಯ ಚೆಕ್ಗಳನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿವೆ.
ಈ ವೇಳೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಬಿ.ಎಸ್.ಇ ಸಂಸ್ಥೆಯ ತಿಲಕ್ ರಾಜ್ ,ರಿಲಯನ್ಸ್ ಕಂಪನಿಯ ಉಪಾಧ್ಯಕ್ಷ ಜಿಮ್ಮಿ ಅಂಬ್ರೋಲಿಯ ಮತ್ತು ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.