ETV Bharat / city

ಮೀಸಲು ಸೌಲಭ್ಯ ಕಲ್ಪಿಸದೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದ್ರೆ ಹಿಂದುಳಿದ ವರ್ಗಕ್ಕೆ ಅನ್ಯಾಯ: ಸಿದ್ದರಾಮಯ್ಯ - without reservation An election for urban and rural local bodies is unfair to backward classes

ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

reservation-in-election-for-backward-classes
ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯ : ಸಿದ್ದರಾಮಯ್ಯ
author img

By

Published : Mar 31, 2022, 5:49 PM IST

ಬೆಂಗಳೂರು : ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಮೀಸಲು ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಕಾನೂನಾತ್ಮಕವಾಗಿ ಪರಿಶೀಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೀಸಲು ಸೌಲಭ್ಯ ಒದಗಿಸುವ ಮುನ್ನ ಸಮೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಆ ವರದಿಯನ್ನು ಪರಿಗಣಿಸುವ ಸಾಧ್ಯತೆ ಕುರಿತಾಗಿಯೂ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಮತ್ತೊಂದು ಆಯೋಗವನ್ನು ರಚನೆ ಮಾಡಿ ಸಮೀಕ್ಷೆ ನಡೆಸುವುದು ಸೂಕ್ತ. ಅಲ್ಲಿಯವರೆಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬಾರದು. ಇಲ್ಲದಿದ್ದರೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಆಗುತ್ತದೆ. ಆ ವರ್ಗಗಳಿಗೆ ಭಾರಿ ಅನ್ಯಾಯವಾಗುತ್ತದೆ. ಹಿಂದುಳಿದ ವರ್ಗದವರನ್ನು ಸಾಮಾನ್ಯ ವರ್ಗದಲ್ಲಿ ಸೇರಿಸಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮೀಸಲು ಪ್ರಮಾಣ ಹೆಚ್ಚಿಸಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ವಾಲ್ಮೀಕಿ ಸಮುದಾಯದ ಸ್ವಾಮೀಜಿಯವರು ಕಳೆದ 50 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಅವರ ಬೇಡಿಕೆಯನ್ನು ಈಡೇರಿಸುವ ಕುರಿತಾಗಿಯೂ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ಓದಿ : ಶ್ರೀಶೈಲದಲ್ಲಿ ಕನ್ನಡಿಗರು -ಸ್ಥಳೀಯರ ನಡುವೆ ಘರ್ಷಣೆ: ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.